ಬೆಳಗಾವಿ: ಬದಲಾದ ರಾಜಕೀಯ ಸನ್ನಿವೇಶದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಬೆಳಗಾವಿ ಲೋಕಸಭೆ ಚುನಾವಣೆ ಕ್ಷೇತ್ರದಲ್ಲಿ ಬಿಜೆಪಿಯ ಜಗದೀಶ್ ಶೆಟ್ಟರ್ ಅವರು ಗೆಲುವು ಸಾಧಿಸಿದ್ದಾರೆ.
ಬಿಜೆಪಿ ಭದ್ರಕೋಟೆಯೇ ಆಗಿರುವ ಬೆಳಗಾವಿಯಲ್ಲಿ ಈ ಬಾರಿ ಬಿಜೆಪಿಯಿಂದ ಜಗದೀಶ್ ಶೆಟ್ಟರ್ ಕಣಕ್ಕಿಳಿದರೆ, 2014ರ ಲೋಕಸಭೆ ಚುನಾವಣೆಯಲ್ಲಿ ಸೋಲುಂಡಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಸ್ಪರ್ಧಿಸಿದ್ದರು. ಆದರೆ, ಕ್ಷೇತ್ರದ ಮತದಾರರು ಜಗದೀಶ್ ಶೆಟ್ಟರ್ ಅವರನ್ನು 1.33 ಲಕ್ಷ ಮತಗಳಿಂದ ಗೆಲ್ಲಿಸಿದ್ದಾರೆ. ಶೆಟ್ಟರ್ ಗೆಲುವಿನ ಕುರಿತು ಚುನಾವಣೆ ಆಯೋಗವು ಅಧಿಕೃತ ಘೋಷಣೆ ಮಾಡುವುದೊಂದೇ ಬಾಕಿ ಉಳಿದಿದೆ.