ದಾವಣಗೆರೆ: ಬೆಣ್ಣೆ ದೋಸೆಗೆ ಹೆಸರುವಾಸಿಯಾಗಿರವ ದಾವಣಗೆರೆ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಪ್ರಭಾ ಮಲ್ಲಿಕಾರ್ಜುನ್ ಅವರು ಗೆಲುವು ಸಾಧಿಸಿದ್ದಾರೆ. ಆ ಮೂಲಕ ದಾವಣಗೆರೆ ಜಿಲ್ಲೆಯ ಮೇಲೆ ಶಾಮನೂರು ಶಿವಶಂಕರಪ್ಪ ಅವರ ಕುಟುಂಬವು ಸಂಪೂರ್ಣ ಹಿಡಿತ ಸಾಧಿಸಿದಂತಾಗಿದೆ.
ಬಿಜೆಪಿಯ ಗಾಯತ್ರಿ ಸಿದ್ದೇಶ್ವರ್ ಅವರು ದಾವಣಗೆರೆ ಲೋಕಸಭೆ ಕ್ಷೇತ್ರದಲ್ಲಿ ಸೋಲನುಭವಿಸಿದ್ದು, ಭಾರಿ ಹಿನ್ನಡೆಯಾದಂತಾಗಿದೆ.
ಜಿ.ಎಂ.ಸಿದ್ದೇಶ್ವರ್ ಅವರು ಅನಾರೋಗ್ಯದ ಮಧ್ಯೆಯೂ ಪ್ರಚಾರದಲ್ಲಿ ತೊಡಗಿಕೊಂಡಿದ್ದರು. ನರೇಂದ್ರ ಮೋದಿ ಅವರ ಅಲೆಯು ಕೂಡ ಕ್ಷೇತ್ರದಲ್ಲಿತ್ತು. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಮಧ್ಯಸ್ಥಿಕೆಯಿಂದಾಗಿ ಕ್ಷೇತ್ರದಲ್ಲಿ ಭುಗಿಲೆದ್ದಿದ್ದ ಭಿನ್ನಮತವು ಶಮನವಾಗಿತ್ತು. ಹಾಗಾಗಿ, ಗಾಯತ್ರಿ ಸಿದ್ದೇಶ್ವರ್ ಅವರಿಗೆ ಗೆಲುವು ಸಿಕ್ಕರೂ ಅಚ್ಚರಿ ಇಲ್ಲ ಎಂದು ಹೇಳಲಾಗುತ್ತಿತ್ತು. ಆದರೂ ಕ್ಷೇತ್ರದಲ್ಲಿ ಕಮಲ ಪಾಳಯಕ್ಕೆ ಹಿನ್ನಡೆಯಾದಂತಾಗಿದೆ.