ಬೆಂಗಳೂರು: ಬಜರಂಗದಳ ನಿಷೇಧ ಪ್ರಸ್ತಾವ ಮುಂದಿಟ್ಟು “ಜೈ ಬಜರಂಗಬಲಿ ಎಂದು ಘೋಷಣೆ ಕೂಗಿ ಓಟಿನ ಬಟನ್ ಒತ್ತಿ” ಎಂದು ಕರೆ ನೀಡುವ ಮೂಲಕ ಧಾರ್ಮಿಕ ಭಾವನೆ ಕೆರಳಿಸುವ ಮತ್ತು ಶಾಂತಿಗೆ ಭಂಗ ಉಂಟು ಮಾಡಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸೂಕ್ತ ಕ್ರಮ ಜರಗಿಸಬೇಕು ಎಂದು ಕಾಂಗ್ರೆಸ್ ಪಕ್ಷ ಚುನಾವಣ ಆಯೋಗಕ್ಕೆ ದೂರು ನೀಡಿದೆ.
ಜಾತಿ-ಧರ್ಮದ ಆಧಾರದಲ್ಲಿ ಮತ ಕೇಳು ವಂತಿಲ್ಲ. ಆದರೆ ಮೋದಿ ಚುನಾವಣ ರ್ಯಾಲಿ ಯಲ್ಲಿ ಹಿಂದೂ ದೇವತೆಗಳ ಹೆಸರನ್ನು ಬಳಸಿ ದ್ದಾರೆಂದು ದೂರಿನಲ್ಲಿ ಆರೋಪಿಸಲಾಗಿದೆ.
ಜತೆಗೆ ಕಾಂಗ್ರೆಸ್ ಪ್ರಣಾಳಿಕೆ ಸುಟ್ಟು ಹಾಕಿದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧವೂ ದೂರು ಸಲ್ಲಿಸಲಾಗಿದೆ. ದೂರನ್ನು ಪರಿಶೀಲಿಸಿ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.