Breaking
Mon. Jun 17th, 2024

ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ, ಕಿಟಕಿ ಗಾಜು ಪುಡಿ ಪುಡಿ

By Mooka Nayaka News Jun 5, 2024
Spread the love

ಚಿಕ್ಕಬಳ್ಳಾಪುರ: ಲೋಕಸಭೆ ಚುನಾವಣೆ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ನಿನ್ನೆ ರಾತ್ರಿ ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ ಮನೆ ಮೇಲೆ ಕಲ್ಲು ತೂರಾಟ ನಡೆದಿದೆ.

ಚಿಕ್ಕಬಳ್ಳಾಪುರ ನಗರದ ಕಂದವಾರದಲ್ಲಿರುವ ಶಾಸಕ ಪ್ರದೀಪ್ ಮನೆಯ ಮೇಲೆ ಕಿಡಿಗೇಡಿಗಳು ನಡೆಸಿದ ಕಲ್ಲುತೂರಾಟದಲ್ಲಿ ಕಿಟಕಿ ಗಾಜು ಒಡೆದಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಪೊಲೀಸ್ ಉಪಾಧೀಕ್ಷಕ ಎಸ್. ಶಿವಕುಮಾರ್, ಪೊಲೀಸ್ ಇನ್ಸ್ಪೆಕ್ಟರ್ ಎಂ.ಮಂಜುನಾಥ ಹಾಗೂ ಸಿಬ್ಬಂದಿ ಶಾಸಕರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮನೆಯ ಸಿಸಿಟಿವಿ ಪರಿಶೀಲನೆ ನಡೆಸಲಾಗಿದ್ದು ಮನೆಯಲ್ಲಿದ್ದ ಸಿಬ್ಬಂದಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಡಾ.ಕೆ.ಸುಧಾಕರ್ ಗೆಲುವು ಹಿನ್ನಲೆ ಕಲ್ಲು ತೂರಾಟ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ.

ಘಟನೆ ಸಂಬಂಧ ಪ್ರತಿಕ್ರಿಯಿಸಿರುವ ಶಾಸಕ ಪ್ರದೀಪ್ ಈಶ್ವರ್ ಅವರ ತಮ್ಮ ಚೇತನ್, ಲೋಕಸಭಾ ಚುನಾವಣೆಯಲ್ಲಿ ಡಾ.ಕೆ.ಸುಧಾಕರ್ ಗೆದ್ದ ಕಾರಣ ಅವರ ಬೆಂಬಲಿಗರೆ ಕೃತ್ಯ ಎಸಗಿದ್ದಾಗಿ ಶಂಕೆ ವ್ಯಕ್ತಪಡಿಸಿದ್ದಾರೆ.

ಶಾಸಕರಾದ ಪ್ರದೀಪ್ ಈಶ್ವರ್ ಮನೆಯ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂಧ ಮನೆಯ ಸಿಬ್ಬಂದಿ ಮುನಿಕೃಷ್ಣ ಮಾಹಿತಿ ನೀಡಿ, ರಾತ್ರಿ 10.15 ಸಮಯದಲ್ಲಿ ನಾಲ್ಕು ಜನ ಹುಡುಗರು ಕಲ್ಲು ತೂರಾಟ ನಡೆಸಿದ್ದಾರೆ. ಸಿಸಿಟಿವಿ ಕ್ಯಾಮೆರಾ ಸೆನ್ಸರ್ ಆನ್ ಆಗ್ತಿದ್ದಂತೆ ಹುಡುಗರು ಓಡಿ ಹೋದರು. ನಾಲ್ಕೈದು ಕಲ್ಲುಗಳನ್ನು ಎಸೆದಿದ್ದಾರೆ. ಮನೆಯ ಕಿಟಕಿ ಪುಡಿ ಪುಡಿ ಆಗಿದೆ. ಕಲ್ಲಿನ ಶಬ್ದ ಕೇಳಿ ಆಚೆ ಬಂದೆವು ಭಯ ಆಯಿತು. ಅಭಿ, ತಾರಕ್ ನಾನು ರೂಮ್ ನಲ್ಲಿ ಇದ್ದೆವು. ಮನೆ ಮಾಡಿ ಒಂದು ವರ್ಷ ಆಗಿದೆ. ಇದೇ ಮೊದಲ ಬಾರಿಗೆ ಈ ರೀತಿಯ ಘಟನೆ ನಡೆದಿದೆ ಎಂದರು.

 

 

Related Post