Breaking
Mon. Jun 17th, 2024

ಮಾಧ್ಯಮ ರಂಗದ ಭೀಷ್ಮ ರಾಮೋಜಿ ರಾವ್ ಇನ್ನಿಲ್ಲ

By Mooka Nayaka News Jun 8, 2024
Spread the love

ಹೈದರಾಬಾದ್: ಮಾಧ್ಯಮ ರಂಗದ ಭೀಷ್ಮ ಎಂದೇ ಖ್ಯಾತರಾಗಿದ್ದ ರಾಮೋಜಿ ಗ್ರೂಪ್ಸ್‌ ಸಂಸ್ಥಾಪಕ ರಾಮೋಜಿ ರಾವ್ ಅವರು ಇಹಲೋಕ ತ್ಯಜಿಸಿದ್ದಾರೆ. ಇಂದು ಬೆಳಗ್ಗೆ 4.50ಕ್ಕೆ ಅವರು ಕೊನೆಯುಸಿರೆಳೆದಿದ್ದಾರೆ. ರಾಮೋಜಿ ರಾವ್ ಅವರಿಗೆ 87 ವರ್ಷ ವಯಸ್ಸಾಗಿತ್ತು.

ರಾಮೋಜಿ ರಾವ್ ಅವರನ್ನು ಜೂನ್ 5 ರಂದು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೈದರಾಬಾದ್‌ನ ನಾನಾಕರಮ್‌ಗುಡದಲ್ಲಿ ಇರುವ ಸ್ಟಾರ್ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ವಯೋ ಸಹಜ ಆರೋಗ್ಯ ಸಮಸ್ಯೆಗಳ ಹಿನ್ನೆಲೆಯಲ್ಲಿ ಅವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ರಾಮೋಜಿ ರಾವ್ ಅವರ ಪಾರ್ಥಿವ ಶರೀರವನ್ನು ಹೈದರಾಬಾದ್‌ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಇರುವ ಅವರ ಮನೆಗೆ ರವಾನೆ ಮಾಡಲಾಗಿದೆ. ರಾಮೋಜಿ ರಾವ್ ಅವರ ನಿವಾಸದಲ್ಲೇ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಕುಟುಂಬಸ್ಥರು, ಸ್ನೇಹಿತರು ಹಾಗೂ ಅಭಿಮಾನಿಗಳಿಗೆ ರಾಮೋಜಿ ರಾವ್ ಅವರ ನಿವಾಸದಲ್ಲೇ ಅಂತಿಮ ದರ್ಶನಕ್ಕೆ ಅವಕಾಶ ನೀಡಲು ತೀರ್ಮಾನಿಸಲಾಗಿದೆ.

1936ರ ನವೆಂಬರ್ 16 ರಂದು ಕೃಷಿಕ ಕುಟುಂಬದಲ್ಲಿ ಜನಿಸಿದ ರಾಮೋಜಿ ರಾವ್ ಅವರು ಸಾಗಿ ಬಂದ ಹಾದಿ ನಿಜಕ್ಕೂ ರೋಚಕ. ಆಂಧ್ರ ಪ್ರದೇಶದ ಕೃಷ್ಣಾ ಜಿಲ್ಲೆಯ ಪೆದಪರುಪುಡಿ ಗ್ರಾಮದಲ್ಲಿ ಜನಿಸಿದ ರಾಮೋಜಿ ರಾವ್ ಅವರು, ಭವ್ಯವಾದ ರಾಮೋಜಿ ಫಿಲ್ಮ್‌ ಸಿಟಿಯ ನಿರ್ಮಾತೃಗಳು. ವಿಶ್ವದ ಅತಿ ದೊಡ್ಡ ಥೀಮ್ ಪಾರ್ಕ್‌ ಹಾಗೂ ಸಿನಿಮಾ ಸ್ಟುಡಿಯೋ ಅನ್ನೋ ಹೆಗ್ಗಳಿಕೆ ರಾಮೋಜಿ ಫಿಲ್ಮ್‌ ಸಿಟಿಗೆ ಇದೆ.

ರಾಮೋಜಿ ರಾವ್ ಅವರು ಕೈಗೊಂಡ ಪ್ರತಿಯೊಂದು ಯೋಜನೆಯೂ ಇಂದು ಇತಿಹಾಸ ನಿರ್ಮಿಸಿವೆ! ಮಾರ್ಗದರ್ಶಿ ಚಿಟ್ ಫಂಡ್, ಈನಾಡು ಪತ್ರಿಕೆ, ಈಟಿವಿ ನೆಟ್‌ ವರ್ಕ್‌, ರಮಾ ದೇವಿ ಪಬ್ಲಿಕ್ ಶಾಲೆ, ಪ್ರಿಯಾ ಫುಡ್ಸ್, ಕಲಾಂಜಲಿ, ಉಷಾಕಿರಣ್ ಮೂವೀಸ್, ಮಯೂರಿ ಫಿಲ್ಮ್ ಡಿಸ್ಟ್ರಿಬ್ಯೂಷನ್, ಡಾಲ್ಫಿನ್ಸ್ ಹೋಟೆಲ್ಸ್.. ಹೀಗೆ ರಾಮೋಜಿ ರಾವ್ ಅವರ ಉದ್ಯಮ ಸಾಹಸಗಳು ಒಂದೆರಡಲ್ಲ!

 

Related Post