ಶಿರಸಿ: ಇಲ್ಲಿನ ಶಿರಸಿ-ಕುಮಟಾ ಹೆದ್ದಾರಿಯ ಬಂಡಲ ಬಳಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಹತ್ತಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.
ಬಳ್ಳಾರಿಯಿಂದ ಚಿತ್ರದುರ್ಗ, ಶಿವಮೊಗ್ಗ ಪ್ರವಾಸ ಮುಗಿಸಿ ಶಿರಸಿಯಿಂದ ಮುರ್ಡೇಶ್ವರಕ್ಕೆ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಇಬ್ಬರು ಪ್ರಯಾಣಿಕರನ್ನು ಟಿ.ಎಸ್.ಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಗ್ರಾಮೀಣ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.