Breaking
Tue. Oct 8th, 2024

ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಸಿಎಂ ಕುಮಾರಸ್ವಾಮಿ

By Mooka Nayaka News Jun 9, 2024
Spread the love

ನವದೆಹಲಿ: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಜನತಾ ದಳ(ಜಾತ್ಯತೀತ) ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಭಾನುವಾರ ಎನ್‌ಡಿಎ ಸರ್ಕಾರದಲ್ಲಿ ಕೇಂದ್ರ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಎಚ್ ಡಿ ಕುಮಾರಸ್ವಾಮಿ ಅವರಿಗೆ ಪತಿಜ್ಞಾವಿಧಿ ಬೋಧಿಸಿದರು. ಸರತಿಯಲ್ಲಿ 9ನೇಯವರಾಗಿ ಕುಮಾರಸ್ವಾಮಿ ಅವರು ಪ್ರಮಾಣ ವಚನ ಸ್ವೀಕರಿಸಿದರು. ಎಂಟು ಜನ ಬಿಜೆಪಿ ನಾಯಕರು ಪ್ರಮಾಣ ಸ್ವೀಕರಿಸಿದ ನಂತರ ಎನ್ಡಿಎ ಒಕ್ಕೂಟದ ಮಿತ್ರಪಕ್ಷಗಳಲ್ಲಿ ಮೊದಲಿಗರಾಗಿ ಕುಮಾರಸ್ವಾಮಿ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಲೋಕಸಭೆ ಚುನಾವಣೆಯಲ್ಲಿ ಗೆದ್ದ ಇಬ್ಬರು ಜೆಡಿಎಸ್ ಅಭ್ಯರ್ಥಿಗಳಲ್ಲಿ ಒಬ್ಬರಿಗೆ ಮೋದಿ ಸಂಪುಟದಲ್ಲಿ ಸಚಿವ ಸ್ಥಾನ ನೀಡಲಾಗಿದೆ. ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ.

 

Related Post