ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅರೆಸ್ಟ್ ಆಗಿದ್ದರೂ ಅವರ ಪತ್ನಿ ವಿಜಯಲಕ್ಷ್ಮಿ ಇದುವರೆಗೆ ಒಂದೇ ಒಂದು ಪ್ರತಿಕ್ರಿಯೆ ನೀಡಿಲ್ಲ. ಪವಿತ್ರಾ ಗೌಡ ವಿಚಾರದಲ್ಲಿ ಆಗಾಗ ಸೋಶಿಯಲ್ ಮೀಡಿಯಾಗಳ ಮೂಲಕ ಯುದ್ಧ ಸಾರುತ್ತಿದ್ದ ವಿಜಯಲಕ್ಷ್ಮಿ ಅವರು ಈ ಬಾರಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಪ್ರಕರಣದಲ್ಲಿ ಬಗ್ಗೆ ಅವರ ಅಭಿಪ್ರಾಯ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ಮಂಗಳವಾರ ಬೆಳಗ್ಗಿನಿಂದ ಪ್ರಕರಣ ರಾಜ್ಯಾದ್ಯಂತ ಹವಾ ಎಬ್ಬಿಸಿದ್ದು ಒಬ್ಬೊಬ್ಬರು ಒಂದೊಂದು ಪ್ರತಿಕ್ರಿಯೆ ನೀಡುತ್ತಿದ್ದಾರೆ. ದರ್ಶನ್ ಅಭಿಮಾನಿಗಳಂತೂ ಈ ವಿಚಾರದಲ್ಲಿ ಭಾವುಕರಾಗಿದ್ದಾರೆ. ಆದರೆ ಪತಿ ಜೈಲಿಗೆ ಹೋಗುವ ಸ್ಥಿತಿ ತಂದುಕೊಂಡಿದ್ದರೂ ವಿಜಯಲಕ್ಷ್ಮೀ ಈ ಕುರಿತು ಏನೂ ಹೇಳಿಕೆಗಳನ್ನು ನೀಡಿಲ್ಲ.
ಪವಿತ್ರಾ ಗೌಡ ವಿಚಾರದಲ್ಲಿ ವಿಜಯಲಕ್ಷ್ಮೀ ಈ ಹಿಂದೆ ಸಾಕಷ್ಟು ಬಾರಿ ಸೋಶಿಯಲ್ ಮೀಡಿಯಾ ವಾರ್ ನಡೆಸಿದ್ದರು. ಪವಿತ್ರಾ ವಿರುದ್ಧ ನಾನಾ ರೀತಿಯ ಹೇಳಿಕೆಗಳನ್ನು ನೀಡಿದ್ದರು. ದರ್ಶನ್ ಕೊಲೆ ಅರೋಪದಲ್ಲಿ ಸಿಕ್ಕಿ ಹಾಕಿಕೊಂಡಿರುವುದ ಪವಿತ್ರಾ ಅವರ ವಿಚಾರದಲ್ಲಿ. ಹೀಗಾಗಿ ಅವರಿಗೆ ಸಹಜವಾಗಿಯೇ ಅಸಮಾಧಾನ ಉಂಟಾಗಿರುತ್ತದೆ. ಆದಾಗ್ಯೂ ಅವರು ಇನ್ನೂ ಪ್ರತಿಕ್ರಿಯೆ ಕೊಟ್ಟಿಲ್ಲ.