Breaking
Mon. Jun 17th, 2024

6 ದಿನ ಪೊಲೀಸ್ ಕಸ್ಟಡಿಗೆ ದರ್ಶನ್, ಪವಿತ್ರಾ ಗೌಡ; ರೇಣುಕಾ ಸ್ವಾಮಿ ಹತ್ಯೆ ತನಿಖೆ ಚುರುಕು

By Mooka Nayaka News Jun 11, 2024
Spread the love

ಸ್ಯಾಂಡಲ್ವುಡ್ ನಟ ದರ್ಶನ್  ಈಗ ಪೊಲೀಸರ ಅತಿಥಿ ಆಗಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಅವರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. 6 ದಿನಗಳ ಕಾಲ ಕಸ್ಟಡಿಗೆ ನೀಡಲಾಗಿದೆ.

ದರ್ಶನ್ ಗೆಳತಿ ಪವಿತ್ರಾ ಗೌಡ ಅವರನ್ನೂ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಚಿತ್ರರಂಗನ್ನು ಬೆಚ್ಚಿ ಬೀಳಿಸಿರುವ ಈ ಕೊಲೆ ಪ್ರಕರಣದಲ್ಲಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳಿಸಿದ್ದ ಎಂಬ ಕಾರಣಕ್ಕೆ ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆಸಿಕೊಂಡಿದ್ದ ಕಿಡಿಗೇಡಿಗಳು ಕೊಲೆ ಮಾಡಿದ್ದಾರೆ. ಡಿ ಗ್ಯಾಂಗ್ ಮೇಲೆ ಆರೋಪ ಎದುರಾಗಿದೆ.

ಪ್ರಕರಣದಲ್ಲಿ ಪವಿತ್ರಾ ಗೌಡ ಎ1 ಆಗಿದ್ದಾರೆ. ನಟ ದರ್ಶನ್ ಎ2 ಆಗಿದ್ದಾರೆ. ಕೆ. ಪವನ್ ಎ3 ಆಗಿದ್ದಾನೆ. ರೇಣುಕಾ ಸ್ವಾಮಿ ಕೊಲೆಯಿಂದ ಕುಟುಂಬದವರಿಗೆ ಆಘಾತ ಆಗಿದೆ. ದರ್ಶನ್ ಮತ್ತು ಸಹಚರರಿಗೆ ಸೂಕ್ತ ಶಿಕ್ಷೆ ಆಗಬೇಕು ಎಂದು ಮೃತನ ಕುಟುಂಬದವರು ಒತ್ತಾಯಿಸಿದ್ದಾರೆ.

‘ಎಲ್ಲೆಲ್ಲಿ ಹೊಡೆದಿದ್ದಾರೆ ಎಂಬ ಬಗ್ಗೆ ತನಿಖೆ ಆಗಬೇಕು. ವೆಪನ್ ಸೀಜ್ ಮಾಡಬೇಕು. ಹೀಗಾಗಿ ಪೊಲೀಸ್ ಕಸ್ಟಡಿ ಅಗತ್ಯವಿದೆ. ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡುವುದು ಅಗತ್ಯ’ ಎಂದು ತನಿಖಾಧಿಕಾರಿ ವಾದ ಮಾಡಿದರು. ‘ದರ್ಶನ್ ತಪ್ಪಿಸಿಕೊಂಡಿಲ್ಲ. ತನಿಖೆಗೆ ಸಹಕರಿಸಿದ್ದಾರೆ. ದರ್ಶನ್‌ ವಿರುದ್ಧ ಯಾವುದೇ ಆರೋಪವಿಲ್ಲ’ ಎಂದು ದರ್ಶನ್ ಪರ ವಕೀಲರು ವಾದಿಸಿದರು.

 

Related Post