Trending

ನಟ ವಿನೋದ್‌ ರಾಜ್‌ ಆಸ್ಪತ್ರೆಗೆ ದಾಖಲು

Spread the love

ಬೆಂಗಳೂರು: ಕನ್ನಡ ಚಿತ್ರರಂಗದ ನಟ ವಿನೋದ್‌ ರಾಜ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಕರುಳಿನ ಸಮಸ್ಯೆಯಿಂದ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎನ್ನುವ ಮಾಹಿತಿ ತಿಳಿದು ಬಂದಿದೆ.

ತಾಯಿ ಲೀಲಾವತಿ ಅವರ ನಿಧನದ ಬಳಿಕ ಅವರು ಸಮಾಜಮುಖಿ ಕೆಲಸವನ್ನು ಮಾಡುತ್ತಾ ದಿನ ಕಳೆಯುತ್ತಿದ್ದರು. ಇದೀಗ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

11 ವರ್ಷಗಳ ಹಿಂದೆ ವಿನೋದ್‌ ಅವರು ಹಾರ್ಟ್ ಆಪರೇಷನ್‌ಗೆ ಒಳಗಾಗಿದ್ದರು. ಈ ವೇಳೆ ಅವರ ಹಾರ್ಟ್‌ ಗೆ ಸ್ಟಂಟ್‌ ಅಳವಡಿಸಲಾಗಿತ್ತು. ಈಗ ಅದೇ ಸ್ಟಂಟ್‌ ಪರಿಣಾಮದಿಂದ ಅವರಿಗೆ ಕರುಳಿನ ಸಮಸ್ಯೆ ಉಂಟಾಗಿದೆ ಎನ್ನಲಾಗಿದೆ.

ಇದೀಗ ಅವರಿಗೆ ಆಪರೇಷನ್‌ ಮಾಡಲಾಗಿದ್ದು, ಇನ್ನು ಎರಡು – ಮೂರು ದಿನಗಳಲ್ಲಿ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಲಿದ್ದಾರೆ ಎಂದು ವರದಿಯಾಗಿದೆ.

[pj-news-ticker]