Breaking
Tue. Jul 16th, 2024

ಚಿಕ್ಕಮಗಳೂರು: ನೇರಳೆ ಹಣ್ಣು ಕೊಯ್ಯುವ ವೇಳೆ ವಿದ್ಯುತ್ ಶಾಕ್… 7ನೇ ತರಗತಿ ವಿದ್ಯಾರ್ಥಿ ಮೃತ್ಯು

By Mooka Nayaka News Jun 15, 2024
Spread the love

ಚಿಕ್ಕಮಗಳೂರು: ಮರಕ್ಕೆ ಹತ್ತಿ ನೇರಳೆ ಹಣ್ಣು ಕೊಯ್ಯುವ ವೇಳೆ ವಿದ್ಯುತ್ ಶಾಕ್ ಉಂಟಾಗಿ ಏಳನೇ ತರಗತಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಕಡೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಆವರಣದಲ್ಲಿ ನಡೆದಿದೆ.

ಆಕಾಶ್ (13) ಮೃತ ದುರ್ದೈವಿ.

ಕುಪ್ಪಾಳು ಗ್ರಾಮದ ಮೊರಾರ್ಜಿ ವಸತಿ ಶಾಲೆ ಆವರಣದಲ್ಲಿರುವ ನೇರಳೆ ಮರಕ್ಕೆ ಹಣ್ಣು ಕೀಳಲು ಮೂವರು ವಿದ್ಯಾರ್ಥಿಗಳು ಹತ್ತಿದ್ದಾರೆ ಮಳೆನಾಡಿನಲ್ಲಿ ಕೆಲ ದಿನಗಳಿಂದ ಸುರಿಯುತ್ತಿದ್ದ ಮಳೆಯಿಂದಾಗಿ ಮರ ಜಾರುತ್ತಿತ್ತು ಹಾಗೆ ಮರವೇರಿದ್ದ ಆಕಾಶ್ ಕಾಲು ಜಾರಿದೆ ಈ ವೇಳೆ ಆಧಾರಕ್ಕೆಂದು ಅಲ್ಲೇ ಹಾದು ಹೋದ ವಿದ್ಯುತ್ ತಂತಿ ಹಿಡಿದಿದ್ದಾನೆ ಈ ವೇಳೆ ವಿದ್ಯುತ್ ಆಘಾತಕ್ಕೆ ಒಳಗಾಗಿ ಕೆಳಗೆ ಬಿದ್ದಿದ್ದಾನೆ ಇದನ್ನು ಕಂಡ ಇತರ ವಿದ್ಯಾರ್ಥಿಗಳು ಅಧ್ಯಾಪಕರ ಗಮನಕ್ಕೆ ತಂದಿದ್ದು ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಆದರೆ ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಆಕಾಶ್ ಸಾವನ್ನಪ್ಪಿದ್ದಾನೆ.

ಘಟನೆ ಸಂಬಂಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Post