Trending

ಇಂಧನ ಬೆಲೆ ಏರಿಕೆ ವಿರೋಧಿಸಿ ಜೂನ್ 17 ರಂದು ರಾಜ್ಯಾದ್ಯಂತ ಪ್ರತಿಭಟನೆ: ಬಿವೈ ವಿಜಯೇಂದ್ರ

Spread the love

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವ ಕಾಂಗ್ರೆಸ್ ಸರ್ಕಾರದ ನಡೆಯನ್ನು ವಿರೋಧಿಸಿ ಜೂನ್ 17 ರಂದು ಕರ್ನಾಟಕದಾದ್ಯಂತ ಭಾರತೀಯ ಜನತಾ ಪಕ್ಷ ಪ್ರತಿಭಟನೆ ನಡೆಸಲಿದೆ.

ಹೌದು.. ಕರ್ನಾಟಕ ಸರ್ಕಾರ ಶನಿವಾರ ಇಂಧನದ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಿಸಿದ್ದು, ಇದು ಪೆಟ್ರೋಲ್ ಮತ್ತು ಡೀಸೆಲ್ ದುಬಾರಿಯಾಗಲಿದೆ. ಪೆಟ್ರೋಲ್ ಬೆಲೆ ಲೀಟರ್‌ಗೆ 3 ರೂಪಾಯಿ ಮತ್ತು ಡೀಸೆಲ್ ಲೀಟರ್‌ಗೆ 3.5 ರೂಪಾಯಿ ಏರಿಕೆಯಾಗಿದೆ.

ಇದನ್ನು ರಾಜ್ಯ ಬಿಜೆಪಿ ನಾಯಕರು ವಿರೋಧಿಸಿದ್ದು, ಈ ಬಗ್ಗೆ ಭಾನುವಾರ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ್ದಾರೆ.

ಮುಖ್ಯಮಂತ್ರಿಗಳು ಕೂಡಲೇ ಈ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸುತ್ತೇವೆ.ನಾಳೆ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದ್ದು, ಧರಣಿ ಹಿಂಪಡೆಯುವವರೆಗೂ ಸುಮ್ಮನಿರುವುದಿಲ್ಲ ಎಂದು ವಿಜಯೇಂದ್ರ ಜಿಲ್ಲಾ ಕೇಂದ್ರವಾದ ಹಾಸನದಲ್ಲಿ ಹೇಳಿದರು.

ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುವುದು. ಐದು ಗ್ಯಾರಂಟಿಗಳಿಂದಾಗಿ ಯಾವುದೇ ಹೊಸ ಕಾರ್ಯಕ್ರಮಗಳನ್ನು ಪ್ರಾರಂಭಿಸಲು ಸಾಧ್ಯವಾಗದ ಕಾರಣ ಹತಾಶ ಮುಖ್ಯಮಂತ್ರಿ ಸಿದ್ದರಾಮಯ್ಯ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸಿದ್ದಾರೆ ಎಂದು ವಿಜಯೇಂದ್ರ ಆರೋಪಿಸಿದರು.

[pj-news-ticker]