ಶಿವಮೊಗ್ಗ: ಬಿಜೆಪಿ ಹಿರಿಯ ನಾಯಕ ಮಾಜಿ ವಿಧಾನ ಪರಿಷತ್ ಸದಸ್ಯ ಭಾನು ಪ್ರಕಾಶ್ ನಿಧನರಾಗಿದ್ದಾರೆ.
ಇಂದು ಗೋಪಿ ವೃತ್ತದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಭಾನು ಪ್ರಕಾಶ್ ಪ್ರತಿಭಟನೆ ನಂತರ ಸುಸ್ತು ಕಂಡು ಬಂದಿದೆ ತಕ್ಷಣ ಮ್ಯಾಕ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಯಿತು ದುರಾದೃಷ್ಟವಶಾತ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನ ರಾಗಿದ್ದಾರೆ.
ಭಾನು ಪ್ರಕಾಶ್ ರವರ ಪಾರ್ಥೀವ ಶರೀರವನ್ನು ಮತ್ತೂರಿನ ಸ್ವಗೃಹಕ್ಕೆ ತೆಗೆದುಕೊಂಡು ಹೋಗಲಾಗಿದೆ.