Breaking
Tue. Jul 16th, 2024

BJP vs BJP; ಶಾಸಕ ಬಿ.ಪಿ. ಹರೀಶ್ ವಿರುದ್ಧ ಕಿಡಿ ಕಾರಿದ ರೇಣುಕಾಚಾರ್ಯ

By Mooka Nayaka News Jun 17, 2024
Spread the love

ದಾವಣಗೆರೆ: ಹರಿಹರ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಬಗ್ಗೆ ಮಾತಾಡಿದರೆ ಸರಿ ಇರಲ್ಲ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಎಚ್ಚರಿಕೆ ನೀಡಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ನಾವು ಬಿಜೆಪಿಗೆ ಮನಃಪೂರ್ವಕವಾಗಿ ಕೆಲಸ ಮಾಡಿದ್ದೇವೆ. ಹರಿಹರ ಕ್ಷೇತ್ರದಲ್ಲಿ ಬಿಜೆಪಿಗಿಂತಲೂ ಕಾಂಗ್ರೆಸ್ ಹೆಚ್ಚು ಮತ ತೆಗೆದು ಕೊಂಡಿದೆ. ಹರೀಶ್ ಅವರೊಂದಿಗೆ ಜೆಡಿಎಸ್‌ನ ಮಾಜಿ ಶಾಸಕ ಎಚ್.ಎಸ್. ಶಿವಶಂಕರ ಇದ್ದರು. ಅವರಿಬ್ಬರು ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮತ ಪಡೆದಿದ್ದರು. ಲೋಕ ಸಭೆ ಚುನಾವಣೆಯಲ್ಲಿ ಕೇವಲ 70 ಸಾವಿರ ಮತಗಳು ಮಾತ್ರ ಬಂದಿವೆ. ತನ್ನದೇ ಕ್ಷೇತ್ರದಲ್ಲಿಯೇ ಬಿಜೆಪಿಗೆ ಲೀಡ್ ಕೊಡದ ಶಾಸಕ ಹರೀಶ್ ನಮ್ಮ ಮೇಲೆ ಆರೋಪ ಮಾಡಿದರೆ ಸುಮ್ಮನಿರುವುದಿಲ್ಲ ಎಂದು ಗುಡುಗಿದರು.

Related Post