Breaking
Sat. Oct 12th, 2024

ಎಸ್‌ಪಿಪಿ ಬದಲಿಸಲು ಯಾರ ಒತ್ತಡವೂ ಇಲ್ಲ, ಹಾಕಿದ್ರೆ ಕೇಳೋದೂ ಇಲ್ಲ: ಸಿದ್ದರಾಮಯ್ಯ

By Mooka Nayaka News Jun 19, 2024
Spread the love

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ  ವಿಶೇಷ ಸರ್ಕಾರಿ ಅಭಿಯೋಜಕ (ಎಸ್‌ಪಿಪಿ) ಅವರನ್ನು ಬದಲಾವಣೆ ಮಾಡಲು ನನ್ನ ಮೇಲೆ ಯಾವ ಸಚಿವರ, ಶಾಸಕರ ಒತ್ತಡವಿಲ್ಲ. ನನ್ನ ಮೇಲೆ ಒತ್ತಡ ಹಾಕಿದರೆ ಕೇಳುವುದೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಅಭಿಯೋಜಕ ಪ್ರಸನ್ನ ಕುಮಾರ್ ಬದಲಾವಣೆಗೆ ಒತ್ತಡ ಹಾಕಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಮಾಧ್ಯಮಗಳಲ್ಲಿ ಈ ಬಗ್ಗೆ ಬಿತ್ತರವಾಗುತ್ತಿರುವುದು ಸುಳ್ಳು ಹಾಗೂ ಸತ್ಯಕ್ಕೆ ದೂರವಾದುದು. ಕಾನೂನು ಏನು ಹೇಳುತ್ತದೆಯೋ ಅದನ್ನೇ ಮಾಡುತ್ತೇವೆ. ಪೊಲೀಸ್‌ನವರಿಗೆ ಪ್ರಕರಣದಲ್ಲಿ ಎಲ್ಲಾ ಸ್ವಾತಂತ್ರ್ಯವನ್ನೂ ನೀಡಿದ್ದು, ಕಾನೂನಿನ ಪ್ರಕಾರ ತನಿಖೆ ಮಾಡಲು ಸೂಚಿಸಲಾಗಿದೆ. ಎಸ್‌ಪಿಪಿ ಬದಲಾವಣೆಯ ಪ್ರಸ್ತಾವನೆ ನನ್ನ ಮುಂದಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು.

 

Related Post