ನವದೆಹಲಿ: ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಭರ್ಜರಿ ಬಹುಮತ ಪಡೆದಿರುವ ಕಾಂಗ್ರೆಸ್‌ಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
“ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ ಪಕ್ಷಕ್ಕೆ ಅಭಿನಂದನೆಗಳು. ಜನರ ಆಶೋತ್ತರಗಳನ್ನು ಈಡೇರಿಸಲು ನನ್ನ ಶುಭಾಶಯಗಳು. ಕರ್ನಾಟಕ ಚುನಾವಣೆಯಲ್ಲಿ ನಮ್ಮನ್ನು ಬೆಂಬಲಿಸಿದ ಎಲ್ಲರಿಗೂ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ಬಿಜೆಪಿ ಕಾರ್ಯಕರ್ತರ ಶ್ರಮವನ್ನು ನಾನು ಪ್ರಶಂಸಿಸುತ್ತೇನೆ. ಮುಂಬರುವ ದಿನಗಳಲ್ಲಿ ಇನ್ನಷ್ಟು ಹುರುಪಿನಿಂದ ನಾವು ಕರ್ನಾಟಕದ ಸೇವೆ ಮಾಡುತ್ತೇವೆ’’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.