ನವದೆಹಲಿ: ದೆಹಲಿ ಮದ್ಯ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಮಂಜೂರಾದ ಖುಷಿಯಲ್ಲಿದ್ದ ಅರವಿಂದ್ ಕೇಜ್ರಿವಾಲ್ ಗೆ ಹಿನ್ನಡೆಯಾಗಿದೆ. ನ್ಯಾಯಾಲಯ ನೀಡಿದ ಬಿಡುಗಡೆ ಆದೇಶಕ್ಕೆ ದೆಹಲಿ ಹೈಕೋರ್ಟ್ ತಡೆ ನೀಡಿದೆ.
ಕೇಜ್ರಿವಾಲ್ ಗೆ ಗುರುವಾರ ದಿಲ್ಲಿಯ ರೋಸ್ ಅವೆನ್ಯೂ ನ್ಯಾಯಾಲಯವು ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು ಮಾಡಿತ್ತು ಅದರಂತೆ ಶುಕ್ರವಾರ ಜೈಲಿನಿಂದ ಬಿಡುಗಡೆಹೊಂದುವ ಖುಷಿಯಲ್ಲಿದ್ದರು ಆದರೆ ಇದರ ನಡುವೆ ಜಾರಿ ನಿರ್ದೇಶನಾಲಯ ಕೇಜ್ರಿವಾಲ್ ಜಾಮೀನು ಅರ್ಜಿಯ ವಿರುದ್ಧ ಹೈಕೋರ್ಟ್ ಮೊರೆ ಹೋಗಿದ್ದು ಅರ್ಜಿ ಆಲಿಸಿದ ಹೈಕೋರ್ಟ್ ಕೇಜ್ರಿವಾಲ್ ಬಿಡುಗಡೆಗೆ ತಡೆ ನೀಡಿ ಆದೇಶ ಹೊರಡಿಸಿದೆ.
ಗುರುವಾರ ರೋಸ್ ಅವೆನ್ಯೂ ನ್ಯಾಯಾಲಯವು 1 ಲಕ್ಷ ರೂ ವೈಯಕ್ತಿಕ ಬಾಂಡ್, ತನಿಖೆಗೆ ಅಡ್ಡಿಪಡಿಸದಂತೆ ಅಲ್ಲದೆ ಸಾಕ್ಷಿದಾರರ ಮೇಲೆ ಯಾವುದೇ ಪ್ರಭಾವ ಬೀರದಂತೆ ಷರತ್ತುಗಳನ್ನು ವಿಧಿಸಿ ಇದರ ಆಧಾರದಲ್ಲಿ ದಿಲ್ಲಿ ಸಿಎಂಗೆ ಜಾಮೀನು ಮಂಜೂರು ಮಾಡಿತ್ತು. ಈ ನಡುವೆ ಜಾಮೀನು ಆದೇಶಕ್ಕೆ 48 ಗಂಟೆಗಳ ತಡೆ ನೀಡಬೇಕು ಎಂಬ ಜಾರಿ ನಿರ್ದೇಶನಾಲಯದ ಮನವಿ ಮಾಡಿತ್ತು ಆದರೆ ನ್ಯಾಯಾಲಯ ಜಾರಿ ನಿರ್ದೇಶನಾಲಯದ ಮನವಿಯನ್ನು ತಿರಸ್ಕರಿಸಿದೆ.