Breaking
Tue. Jul 16th, 2024

ಸೊರಬ : ಡೆಂಘೀ ಬಾಧಿತೆಗೆ ಹೃದಯಾಘಾತ: ಗ್ರಾಪಂ ಮಾಜಿ ಅಧ್ಯಕ್ಷೆ ಮೃತ್ಯು

By Mooka Nayaka News Jun 21, 2024
Spread the love

ಸೊರಬ: ಡೆಂಘೀ ಜ್ವರದಿಂದ ಬಳಲುತ್ತಿದ್ದ ಸೊರಬ ತಾಲೂಕಿನ ಮಹಿಳೆಯೋರ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗಲೇ ಹೃದಯಾಘಾತದಿಂದ ಮೃತಪಟ್ಟ ಘಟನೆ ಇಲ್ಲಿನ ಉಪವಿಭಾಗೀಯ ಆಸ್ಪತ್ರೆಯಲ್ಲಿ ಶುಕ್ರವಾರ ನಡೆದಿದೆ.

ಸೊರಬ ತಾಲೂಕಿನ ಶಿಗ್ಗಾ ಗ್ರಾಮ ಪಂಚಾಯ್ತಿಯ ಮಾಜಿ ಅಧ್ಯಕ್ಷೆ ವಸಂತ (40) ಮೃತಪಟ್ಟವರು. ವಾಂತಿ, ಜ್ವರದ ಹಿನ್ನೆಲೆಯಲ್ಲಿ ಅವರನ್ನು ಗುರುವಾರ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷೆಗೊಳಪಡಿಸಿದಾಗ ಡೆಂಘೀ ಪಾಸಿಟಿವ್ ಬಂದಿತ್ತು. ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಗೆ ದಿಢೀರ್ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಮೃತರ ಪತಿ ಶಿವಮೂರ್ತಿ ಹಾಲಿ ಶಿಗ್ಗಾ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷರಾಗಿದ್ದು, ಮೃತರು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಸಾಗರ ತಾಲೂಕು ಸೇರಿದಂತೆ ಅಕ್ಕಪಕ್ಕದ ತಾಲೂಕುಗಳಲ್ಲಿ ಕೂಡ ಡೆಂಘೀ ಜ್ವರ ವಿಪರೀತವಾಗಿದ್ದು ಜನ ಆತಂಕಕ್ಕೊಳಗಾಗುವಂತಾಗಿದೆ.

Related Post