ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಲಯ ಆದೇಶ ನೀಡಿದೆ.
ಶನಿವಾರ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯ ದರ್ಶನ್, ವಿನಯ್, ಪ್ರದೋಶ್ ಹಾಗೂ ಧನರಾಜ್ ಅವರನ್ನು ಜು.4 ರವರೆಗೆ(12 ದಿನಗಳ ಕಾಲ) ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ.
ಪೊಲೀಸರು ನಾಲ್ವರು ಆರೋಪಿಗಳನ್ನು ಬೇರೆ ಜೈಲಿಗೆ ವರ್ಗಾಯಿಸಲು ಕೋರ್ಟಿನಲ್ಲಿ ಮನವಿ ಮಾಡಿದ್ದಾರೆ. ಸದ್ಯ ಕೋರ್ಟ್ ಮುಂದಿನ ವಿಚಾರಣೆಯನ್ನು ಜೂ.24 ಕ್ಕೆ ಮುಂದೂಡಿದೆ.
ಈಗಾಗಲೇ ಈ ಪ್ರಕರಣದಲ್ಲಿ ಎ1 ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.
ಪರಪ್ಪನ ಅಗ್ರಹಾರದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.ಈ ಹಿಂದೆ 2011 ರಲ್ಲಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಜೈಲುಪಾಲಾಗಿದ್ದರು. ಇದೀಗ 13 ವರ್ಷದ ಬಳಿಕ ಮತ್ತೆ ಜೈಲು ಪಾಲಾಗಿದ್ದಾರೆ.