Breaking
Tue. Jul 16th, 2024

ಆನಂದ ಮಾರ್ಗ ಆಶ್ರಮದಲ್ಲಿ ಹೊಡೆದಾಟ ; ಸ್ವಾಮೀಜಿ ಬರ್ಬರ ಕೊಲೆ

By Mooka Nayaka News Jun 22, 2024
Spread the love

ಕೋಲಾರ: ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಸಂತಳ್ಳಿಯಲ್ಲಿರುವ ಆನಂದ ಮಾರ್ಗ ಆಶ್ರಮದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ ವೇಳೆ ಹಿರಿಯ ಸ್ವಾಮೀಜಿ ಒಬ್ಬರ ಬರ್ಬರ ಹತ್ಯೆಯಾಗಿದೆ.

ಕೊಲೆಯ ಸ್ವಾಮಿಜೀಯನ್ನು ಆಚಾರ್ಯ ಚಿನ್ಮಯಾನಂದ ಎಂದು ತಿಳಿದುಬಂದಿದೆ. ಆಚಾರ್ಯ ಧರ್ಮ ಪ್ರಾಣಾನಂದ ಅವರ ಗುಂಪಿನಿಂದ ಹತ್ಯೆ ನಡೆದಿದೆ. ಈ ಕುರಿತು ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸಂತಳ್ಳಿ ಗ್ರಾಮದ ನಾಲ್ಕು ಎಕರೆ ಜಾಗದಲ್ಲಿ ಆಶ್ರಮ ಇದ್ದು ಹಲವು ವರ್ಷಗಳಿಂದ ಜಾಗದ ಕುರಿತಂತೆ ವಿವಾದ ನಡೆಯುತ್ತಿದೆ. ಇಂದು ಬೆಳಿಗ್ಗೆ ಕೋರ್ಟ್ಗೆ ದಾಖಲೆ ಸಹಿತ ಹೋಗುವ ವೇಳೆ ಮಾರಣಾಂತಿಕ ಹಲ್ಲೆ ನಡೆದಿದೆ ಎನ್ನಲಾಗಿದೆ.

ಮಾರಣಾಂತಿಕ ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿದ್ದ ಚಿನ್ಮಯಾನಂದ ಅವರನ್ನು ಆರ್.ಎಲ್ ಜಾಲಪ್ಪ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸ್ವಾಮೀಜಿ ಮೃತಪಟ್ಟಿದ್ದಾರೆ.

ಈ ಕೊಲೆ ಸಂಬಂಧ ಆಚಾರ್ಯ ಧರ್ಮ ಪ್ರಾಣಾನಂದ ಹಾಗೂ ಅರುಣ್ ಎಂಬುವವರನ್ನು ಮಾಲೂರು ಪೊಲೀಸ್ ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Related Post