ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ಕವಿಕಲ್ ಗಂಡಿ ಬಳಿ ಬುಧವಾರ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದಿದ್ದು, ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೈಸೂರಿನ ಕೆಆರ್ ನಗರದಿಂದ ದತ್ತಪೀಠಕ್ಕೆ ತೆರಳುತ್ತಿದ್ದ ಪ್ರವಾಸಿಗರ ಕಾರು ಪ್ರಪಾತಕ್ಕೆ ಬಿದ್ದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಸೀತಾರಾಮ್, ಸುಗುಣ, ಶ್ರೇಯಸ್, ಶುಭಾ ಅವರು ಗಾಯಗೊಂಡಿದ್ದಾರೆ.
ಚಿಕ್ಕಮಗಳೂರು ಪ್ರವಾಸ ಮುಗಿಸಿಕೊಂಡು ವಾಪಸ್ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಗಾಯಾಳುಗಳನ್ನು ಚಿಕ್ಕಮಗಳೂರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.