Trending

ಶಿವಮೊಗ್ಗ : ವಾಲ್ಮೀಕಿ ನಿಗಮದ ಚಂದ್ರಶೇಖರ್ ಆತ್ಮಹತ್ಯೆ: ಇಬ್ಬರು ಆರೋಪಿಗಳು ನ್ಯಾಯಾಲಯಕ್ಕೆ ಹಾಜರು

Spread the love

ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಸಿಐಡಿ ಅಧಿಕಾರಿಗಳು ಸೋಮವಾರ ಶಿವಮೊಗ್ಗ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಅವರು ಮೇ 26 ಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಶಿವಮೊಗ್ಗ ವಿನೋಬನಗರ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಈ ಘಟನೆ ರಾಜ್ಯದಲ್ಲಿ ಸಂಚಲನ ಮೂಡಿಸಿತ್ತು. ಬಳಿಕ ಇದೇ ಕಾರಣದಿಂದ ಸಚಿವ ನಾಗೇಂದ್ರ ರಾಜೀನಾಮೆ ನೀಡಿದ್ದರು.

ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿರುವ ಆರೋಪಿಗಳಾದ ನಿಗಮ ಮಂಡಳಿ ನಿರ್ದೇಶಕ ಎ1 ಪದ್ಮನಾಭ್, ಹಾಗೂ ಮಂಡಳಿ ಅಕೌಂಟೆಂಟ್ ಸೂಪರ್ ವೈಸರ್ ಎ2 ಪರಶುರಾಮ್ ರನ್ನು ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

ಸಿಐಡಿ ಡಿ.ವೈ.ಎಸ್.ಪಿ. ಮೊಹಮ್ಮದ್ ರಫಿ ನೇತೃತ್ವದ ತಂಡವು ಇಬ್ಬರು ಆರೋಪಿಗಳನ್ನು 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

[pj-news-ticker]