Breaking
Tue. Jul 16th, 2024

ನಂದಿನಿ ಹಾಲಿನ ಪ್ರಮಾಣದಲ್ಲಿ ಹೆಚ್ಚಳ, ದರ ಏರಿಸಿಲ್ಲ

By Mooka Nayaka News Jun 25, 2024
Spread the love

ಬೆಂಗಳೂರು: ನಂದಿನಿ ಹಾಲಿನ ಪ್ಯಾಕೇಟ್‌ಗಳಲ್ಲಿ ಹಾಲಿನ ಪ್ರಮಾಣವನ್ನು 50 ಎಂ.ಎಲ್‌ ಹೆಚ್ಚಳ ಮಾಡಿ, ಹೆಚ್ಚುವರಿ ಹಾಲಿಗೆ 2 ರೂಪಾಯಿ ದರ ನಿಗದಿಪಡಿಸಿ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆಯೇ ವಿನಾ ಹಾಲಿನ ಬೆಲೆಯಲ್ಲಿ ಏರಿಕೆ ಮಾಡಿಲ್ಲ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿ ಅರ್ಧಲೀಟರ್‌ ಹಾಲಿನ ಪ್ಯಾಕೇಟ್‌ ನಲ್ಲಿ ಇನ್ನು ಮುಂದೆ 550 ಎಂಎಲ್‌ ಹಾಲು ಹಾಗೂ ಲೀಟರ್‌ ಪ್ಯಾಕೇಟ್‌ ನಲ್ಲಿ 1,050 ಎಂಎಲ್‌ ಹಾಲು ಸಿಗಲಿದೆ. ಈ ವರೆಗೆ 1,000 ಮಿ.ಲೀ ಹಾಲಿಗೆ ರೂ.42 ಹಾಗೂ 500 ಮಿ.ಲೀ ಹಾಲಿಗೆ ರೂ.22 ದರ ನಿಗದಿಪಡಿಸಲಾಗಿತ್ತು, ಇನ್ನು ಮುಂದೆ 1,050 ಮಿ.ಲೀ ಹಾಗೂ 550 ಮಿ.ಲೀ ಹಾಲಿನ ಪ್ಯಾಕೇಟ್‌ ಗಳನ್ನು ಮಾರಾಟ ಮಾಡಲಾಗುತ್ತಿದ್ದು, ಅದಕ್ಕೆ ಕ್ರಮವಾಗಿ ರೂ.44 ಹಾಗೂ ರೂ.24 ದರ ನಿಗದಿಪಡಿಸಲಾಗುತ್ತದೆ.  ಹಾಲು ಸಂಗ್ರಹಣಾ ಕೇಂದ್ರಗಳಲ್ಲಿ ಯಾವುದೇ ಕಾರಣಕ್ಕೂ ರೈತರು ಹೆಚ್ಚುವರಿಯಾಗಿ ತರುತ್ತಿರುವ ಹಾಲು ನಿರಾಕರಿಸಬಾರದು ಎಂಬ ಸದುದ್ದೇಶದಿಂದ ಕೆಎಂಎಫ್‌ ಸಂಸ್ಥೆ ಪ್ಯಾಕೇಟ್‌ ಗಳಲ್ಲಿ ಹಾಲಿನ ಪ್ರಮಾಣವನ್ನು ಹೆಚ್ಚಳ ಮಾಡುವ ತೀರ್ಮಾನ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Related Post