ಮಂಗಳೂರು: ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲೆಗಳಿಗೆ ಗುರುವಾರ (ಜೂನ್ 27) ರಜೆ ಘೋಷಣೆ ಮಾಡಲಾಗಿದೆ.
ಬುಧವಾರ ಬೆಳಗ್ಗಿನಿಂದಲೇ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅಂಗನವಾಡಿ, ಪ್ರಾಥಮಿಕ ,ಮತ್ತು ಪ್ರೌಢ ಶಾಲೆಗಳಿಗೆ ಗುರುವಾರ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.