Breaking
Mon. Oct 14th, 2024

ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿಗೆ ಅನಾರೋಗ್ಯ: ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು

By Mooka Nayaka News Jun 27, 2024
Spread the love

ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ನಿನ್ನೆ ಬುಧವಾರ ತಡರಾತ್ರಿ ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದಾರೆ ಮತ್ತು ನಿಗಾ ಘಟಕದಲ್ಲಿದ್ದಾರೆ ಎಂದಷ್ಟೇ ಸದ್ಯಕ್ಕೆ ಮಾಹಿತಿ ಸಿಕ್ಕಿದೆ.

96 ವರ್ಷದ ಮಾಜಿ ಉಪ ಪ್ರಧಾನಿ ಅವರನ್ನು ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ನ ಹಳೆಯ ಖಾಸಗಿ ವಾರ್ಡ್‌ನಲ್ಲಿ ದಾಖಲಿಸಲಾಗಿದ್ದು, ಮೂತ್ರಶಾಸ್ತ್ರ ವಿಭಾಗದ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ.

ಎಲ್ ಕೆ ಅಡ್ವಾಣಿಯವರ ಆರೋಗ್ಯ ಸ್ಥಿರವಾಗಿದೆ. ಯೂರಾಲಜಿ, ಕಾರ್ಡಿಯಾಲಜಿ ಮತ್ತು ಜೆರಿಯಾಟ್ರಿಕ್ ಮೆಡಿಸಿನ್ ಸೇರಿದಂತೆ ವಿವಿಧ ತಜ್ಞ ವೈದ್ಯರ ತಂಡ ಅವರನ್ನು ಮೇಲ್ವಿಚಾರಣೆ ಮಾಡುತ್ತಿದೆ ಎಂದು ಮೂಲಗಳು ತಿಳಿಸಿವೆ.

 

Related Post