Spread the love

ಬೆಂಗಳೂರು: ರೂ.2,000 ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆದ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಈಗ ರೂ.2000 ಮೌಲ್ಯದ ನೋಟುಗಳನ್ನು ನಿಷೇಧ ಮಾಡಿರುವ ಪ್ರಧಾನಿ ಮೋದಿಯವರು, 2016ರಲ್ಲಿ ರೂ.500 ಮತ್ತು ರೂ.1000 ನೋಟುಗಳನ್ನು ನಿಷೇಧ ಮಾಡಿದಾಗ ತಿಳಿಸಿದ್ದ ಯಾವ ಉದ್ದೇಶಗಳು ಈಡೇರಿವೆ ಎನ್ನುವುದನ್ನು ದೇಶದ ಜನರಿಗೆ ಮೊದಲು ತಿಳಿಸಬೇಕು ಎಂದು ಹೇಳಿದ್ದಾರೆ.

ಈಗ ರೂ.2000 ಮೌಲ್ಯದ ನೋಟು ನಿಷೇಧಿಸುವುದಿದ್ದರೆ 2016ರಲ್ಲಿ ಅದನ್ನು ಚಲಾವಣೆಗೆ ತಂದದ್ದು ಯಾಕೆ? ಯಾವ ಕಾರಣಕ್ಕಾಗಿ ಈಗ ಇದನ್ನು ನಿಷೇಧಿಸಲಾಗಿದೆ? ಕಪ್ಪು ಹಣವನ್ನು ನಿಯಂತ್ರಿಸುವ ನೋಟು ನಿಷೇಧ ಎಂಬ ಪ್ರಬಲ ಅಸ್ತ್ರವನ್ನು ಪ್ರಧಾನಿ ಮೋದಿಯವರು ರಾಜಕೀಯ ಲಾಭಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆಂದು ಕಿಡಿಕಾರಿದ್ದಾರೆ.

 

Leave a Reply

Your email address will not be published. Required fields are marked *