Breaking
Tue. Jul 16th, 2024

ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಗೆ ಸಚಿವ ಕುಮಾರಸ್ವಾಮಿ ಭೇಟಿ

By Mooka Nayaka News Jun 30, 2024
Spread the love

ಶಿವಮೊಗ್ಗ: ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಗೆ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ ಕುಮಾರಸ್ವಾಮಿ ಭೇಟಿ ನೀಡಿದರು. ಕೇಂದ್ರ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಕಾರ್ಖಾನೆಗೆ ಭೇಟಿ ನೀಡಿದರು.

ಸಚಿವ ಕುಮಾರಸ್ವಾಮಿ ಕಾರ್ಖಾನೆಯ ಆವರಣದ ವಿಶ್ವೇಶ್ವರಯ್ಯನವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.

ಕಾರ್ಖಾನೆಯ ವಿವಿಧ ಘಟಕಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಕುಮಾರಸ್ವಾಮಿ ಅವರು, ಕಾರ್ಖಾನೆಯ ಸ್ಥಿತಿಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.

ಸಂಸದ ಬಿ.ವೈ.ರಾಘವೇಂದ್ರ ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ , ಸೈಲ್ ಅಧ್ಯಕ್ಷ ಅಮರೇಂದ್ರ ಪ್ರಕಾಶ್ ಸೇರಿದಂತೆ ಹಿರಿಯ ಅಧಿಕಾರಿಗಳ ಉಪಸ್ಥಿತರಿದ್ದರು.

Related Post