Breaking
Sat. Oct 12th, 2024

ಶಿವಮೊಗ್ಗ : ಕಾರಿನ ಮೇಲೆ ಮಗುಚಿ ಬಿದ್ದ ಬಸ್… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

By Mooka Nayaka News Jul 3, 2024
Spread the love

ಶಿವಮೊಗ್ಗ: ಶಿರಾಳಕೊಪ್ಪದ ದೇವಿಕೊಪ್ಪ ಬಳಿ ಖಾಸಗಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಬಸ್‌ನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಖಾಸಗಿ ಬಸ್ ಆನವಟ್ಟಿಯಿಂದ ಶಿವಮೊಗ್ಗ ಕಡೆ ಬರುತ್ತಿದ್ದು ಕಾರು ಶಿವಮೊಗ್ಗ ಕಡೆಯಿಂದ ಆನವಟ್ಟಿ ಕಡೆಗೆ ಹೊರಟಿತ್ತು. ಅತಿ ವೇಗವಾಗಿ ಬಂದ ಬಸ್ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡಿದಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಡಿಕ್ಕಿ ರಭಸಕ್ಕೆ ಕಾರು ಛಿದ್ರವಾಗಿದೆ. ಮೃತದೇಹವನ್ನು ಸರಕಾರಿ ಆಸ್ಪತ್ರೆಗೆ ಸಾಗಿಸಲು ಪೊಲೀಸರು ಹರಸಾಹಸಪಟ್ಟರು. ಕಾರು ಚಾಲಕನ ಗುರುತು ಇನ್ನಷ್ಟೆ ತಿಳಿಯಬೇಕಿದೆ.

Related Post