Breaking
Tue. Jul 16th, 2024

ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ಆತ್ಮಹತ್ಯೆಗೆ ಶರಣು: ಕಾರಣ ನಿಗೂಢ

By Mooka Nayaka News Jul 8, 2024
Spread the love

ದಾವಣಗೆರೆ : ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ಪ್ರತಾಪ್ ಕುಮಾರ್ ಕೆಜಿ (41) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಬಿಜೆಪಿ ನಾಯಕ ಬಿಸಿ ಪಾಟೀಲ್ ಅವರ ದೊಡ್ಡ ಮಗಳ ಗಂಡ  ಪ್ರತಾಪ್ ಕುಮಾರ್ ಇಂದು (ಜುಲೈ 08) ದಾವಣಗೆರೆ ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ರಸ್ತೆ ಬದಿ ಕಾರು ನಲ್ಲಿಸಿ ವಿಷ ಸೇವಿಸಿದ್ದಾರೆ. ಇದನ್ನು ಗಮಿಸಿದ ಸ್ಥಳೀಯರು ಪ್ರತಾಪ್ ಕುಮಾರ್ ನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗೆಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಪ್ರತಾಪ್ ಕುಮಾರ್ ಮೃತಪಟ್ಟಿದ್ದಾರೆ.

ದಾವಣಗೆರೆ ಕತ್ತಲಗೆರೆ ಗ್ರಾಮದ ಮೃತ ಪ್ರತಾಪ್ ಕುಮಾರ್,  15 ವರ್ಷದ ಹಿಂದೆ ಬಿಸಿ ಪಾಟೀಲ್ ಅವರ ದೊಡ್ಡ ಮಗಳು ಸೌಮ್ಯಳನ್ನು ಮದುವೆಯಾಗಿದ್ದರು. ಆದ್ರೆ, ಇದೀಗ ಏಕಾಏಕಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

KA 68 M 1458 ನಂಬರಿನ Venue ಕಾರಿನಲ್ಲಿ ಬಂದಿದ್ದ ಪ್ರತಾಪಕುಮಾರ, ಹರಿಹರ-ಶಿವಮೊಗ್ಗ ರಾಜ್ಯ ಹೆದ್ದಾರಿಯಲ್ಲಿ ಬರುವ ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮದ ಬಳಿ ಕಾರು ನಿಲ್ಲಿಸಿ ವಿಷ ಸೇವಿಸಿದ್ದಾರೆ. ಕಾರಿನಲ್ಲಿ ವಿಷದ ಬಾಟಲಿ ಪತ್ತೆಯಾಗಿದೆ. ಆದ್ರೆ, ಪ್ರತಾಪಕುಮಾರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು‌ ಬಂದಿಲ್ಲ.

Related Post