Breaking
Tue. Jul 16th, 2024

ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗೌತಮ್​ ಗಂಭೀರ್ ಆಯ್ಕೆ, ಅಧಿಕೃತ ಘೋಷಣೆ!

By Mooka Nayaka News Jul 9, 2024
Spread the love

ಭಾರತ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆಯಾಗಿದ್ದಾರೆ. ಸ್ವತಃ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಅವರು ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿದ್ದು, ನೂತನ ಕೋಚ್ ಗೌತಮ್ ಗಂಭೀರ್ ಅವರಿಗೆ ಸ್ವಾಗತ ಎಂದು ಬರೆದುಕೊಂಡಿದ್ದಾರೆ.

ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ರಾಹುಲ್ ದ್ರಾವಿಡ್ ಅವರ ಕಾರ್ಯಾವಧಿ ಮುಗಿದಿದ್ದು, ಇದೀಗ ನೂತನ ಕೋಚ್ ಆಗಿ ಟೀಮ್ ಇಂಡಿಯಾದ ಮಾಜಿ ಎಡಗೈ ದಾಂಡಿಗ ಗೌತಮ್ ಗಂಭೀರ ಆಯ್ಕೆಯಾಗಿದ್ದಾರೆ.

ಗೌತಮ್ ಗಂಭೀರ್ ಆಯ್ಕೆಗೂ ಮುನ್ನ ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ಭಾರತ ತಂಡದ ಮಾಜಿ ಆಟಗಾರ ಗೌತಮ್ ಗಂಭೀರ್ ನೇರವಾಗಿ ಆಯ್ಕೆಯಾಗಲಿದ್ದಾರೆ ಎನ್ನಲಾಗಿತ್ತು. ಆದರೆ ಬಿಸಿಸಿಐ ಸಂದರ್ಶನದಲ್ಲಿ ಗಂಭೀರ್ಗೆ ಪ್ರತಿಸ್ಪರ್ಧಿಯಾಗಿ ಡಬ್ಲ್ಯು.ವಿ ರಾಮನ್ ಕಾಣಿಸಿಕೊಂಡಿದ್ದರು.

2021 ರಲ್ಲಿ ಭಾರತ ಮಹಿಳಾ ತಂಡದ ತರಬೇತುದಾರರಾಗಿ ಕಾರ್ಯ ನಿರ್ವಹಿಸಿದ್ದ ರಾಮನ್ ಅವರ ಎಂಟ್ರಿಯೊಂದಿಗೆ ಭಾರತ ತಂಡದ ಮುಂದಿನ ಕೋಚ್ ಯಾರಾಗಲಿದ್ದಾರೆ ಎಂಬ ಕುತೂಹಲ ಏರ್ಪಟ್ಟಿತ್ತು. ಇದೀಗ ಟೀಮ್ ಇಂಡಿಯಾದ ಕೋಚ್ ಹುದ್ದೆಯನ್ನು ಗೌತಮ್ ಗಂಭೀರ್ ಅಲಂಕರಿಸಿದ್ದಾರೆ.

Related Post