ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಆರೋಪಗಳ ಕುರಿತು ತನಿಖೆ ನಡೆಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಇತ್ತೀಚಿಗೆ ಮಳೆಯಿಂದ ಹಾನಿಯಾದ ಪ್ರದೇಶಗಳಲ್ಲಿ ಇಂದು ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ದಿನೇಶ್ ಗುಂಡೂರಾವ್, ಎಲ್ಲಾ ಇಲಾಖೆಗಳಲ್ಲಿ ಪರಿಶೀಲನೆ ನಡೆಸಲಾಗುವುದು, ಒಂದು ವೇಳೆ ಭ್ರಷ್ಟಾಚಾರದಿಂದ ಏನಾದರೂ ನಷ್ಟವಾಗಿದ್ದರೆ ಮತ್ತು ಖಜಾನೆ ಮತ್ತು ಸಂಪನ್ಮೂಲಗಳ ವ್ಯರ್ಥವಾಗಿರುವುದು ಕಂಡುಬಂದರೆ ಖಂಡಿತವಾಗಿ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.