ಚಿಕ್ಕಮಗಳೂರು: ತಾನೇ ಸೆರೆ ಹಿಡಿದ ಹಾವು ಕಚ್ಚಿ ಉರಗತಜ್ಞರೊಬ್ಬರು ಸಾವನ್ನಪ್ಪಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಖ್ಯಾತಿ ಪಡೆದಿದ್ದ ಸ್ನೇಕ್ ನರೇಶ್ (51) ಮೃತ ದುರ್ದೈವಿ.
ನರೇಶ್ ಅವರು ಬೆಳಗ್ಗೆ ನಾಗರಹಾವು ಹಿಡಿದುಕೊಂಡು ಬಂದಿದ್ದರು. ಮಧ್ಯಾಹ್ನ ಮತ್ತೊಂದು ಹಾವು ಹಿಡಿಯಲು ಕರೆ ಬಂದಿದೆ. ಈ ವೇಳೆ ಸ್ಕೂಟಿಯಲ್ಲಿದ್ದ ಹಾವಿನ ಚೀಲದ ಗಂಟು ಬಿಗಿ ಮಾಡಲು ಡಿಕ್ಕಿ ಓಪನ್ ಮಾಡಿದ್ದಾರೆ. ಆದರೆ ದುರಾದೃಷ್ಟವಶಾತ್ ನಾಗರಹಾವು ಕಚ್ಚಿದೆ. ಆಸ್ಪತ್ರೆಗೆ ನರೇಶ್ ಬರುವಷ್ಟರಲ್ಲಿ ಸಾವನ್ನಪ್ಪಿದ್ದಾರೆ.
ಸಾವಿರಾರು ಹಾವುಗಳನ್ನ ಸೆರೆ ಹಿಡಿದಿದ್ದ ಸ್ನೇಕ್ ನರೇಶ್ ಅವರು 2013ರಲ್ಲಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದರು. ಶಾಲಾ ಮಕ್ಕಳಿಗೆ ಹಾವುಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರು.