ದಾವಣಗೆರೆ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಮಹಿಳಾ ಜಾಗೃತಿಗೆ ಮುಂದಾಗಿದ್ದಾರೆ.
ಹೌದು ಚುನಾವಣೆಯಲ್ಲಿ ಸೋಲು ಅನುಭವಿಸಿದ ಬಳಿಕ, ಇದೀಗ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ಬಸ್ಸಿನಲ್ಲಿ ಟಿಕೆಟ್ ತೆಗೆದು ಕೊಳ್ಳಬೇಡಿ, ವಿದ್ಯುತ್ ಬಿಲ್ ಕಟ್ಟಬೇಡಿ ಎಂದು ಮನೆ ಮನೆಗೆ ತೆರಳಿ ಮಹಿಳೆಯರಿಗೆ ಮನವರಿಕೆ ಮಾಡುತ್ತಿದ್ದಾರೆ.
ಚುನಾವಣೆಯಲ್ಲಿ ಸೋತ ಬಳಿಕ ದಿನ ಬೆಳಗಾದ್ರೆ ಹಳ್ಳಿ ಹಳ್ಳಿ ಸುತ್ತುತ್ತಿರುವ ಎಂ.ಪಿ.ರೇಣುಕಾಚಾರ್ಯ. ಅವರು ಬಿಟ್ಟಿ ಗ್ಯಾರೆಂಟಿ ಯೋಜನೆ ಹೇಳಿ ಮತ ಪಡೆದು ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್ ನುಡಿದಂತೆ ನಡೆದಿಲ್ಲ. ಜನರು ಜಾಗೃತರಾಗಿ. ಚುನಾವಣೆಯಲ್ಲಿ ನೀಡಿದ ಆಶ್ವಾಸನೆ ಪೂರೈಕೆಗೆ ಒತ್ತಾಯಿಸಿ ಎಂದು ಜನರಿಗೆ ಹೇಳುತ್ತಿದ್ದಾರೆ.