ತೀರ್ಥಹಳ್ಳಿ: ರಾಷ್ಟ್ರೀಯ ಹೆದ್ದಾರಿ ಕುರುವಳ್ಳಿ- ಬಾಳೆಬೈಲು ಬೈಪಾಸ್ ರಸ್ತೆಯ ಧರೆ ಕುಸಿದಿದ್ದು ವಾಹನಗಳಿಗೆ ಓಡಾಡಲು ತೊಂದರೆ ಆಗಿದೆ.
ರಸ್ತೆಯ ಮೇಲೆ ಮಣ್ಣು ಕುಸಿದು ಬಿದ್ದಿದ್ದು ಸಂಬಂಧಪಟ್ಟ ಅಧಿಕಾರಿಗಳು ಈಗಾಗಲೇ ತೆರವು ಕಾರ್ಯಾಚರಣೆ ಮಾಡುತ್ತಿದ್ದಾರೆ.
ತಾಲೂಕಿನಾದ್ಯಂತ ಪುನರ್ವಸು ಮಳೆ ಅಬ್ಬರ ಹೆಚ್ಚಾಗುತ್ತಿದ್ದು ಇಂದು ಬೆಳಗ್ಗೆಯಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಮತ್ತಷ್ಟು ಮಣ್ಣು ಕುಸಿಯುವ ಭೀತಿ ಎದುರಾಗಿದೆ.