ಹಾಸನ: ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ದೇವಸ್ಥಾನದಲ್ಲಿ ಜಾರಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಆಷಾಢ ನಿಮಿತ್ತ ಉಪವಾಸವಿದ್ದ ರೇವಣ್ಣ ಅವರು ದೇವಾಲಯಕ್ಕೆ ಪೂಜೆಗೆ ಸಲ್ಲಿಸಲು ಹೋಗಿದ್ದಾಗ ಜಾರಿ ಬಿದ್ದಿದ್ದಾರೆ ಎನ್ನಲಾಗಿದೆ. ಕೂಡಲೇ ಅವರನ್ನು ಹೊಳೆನರಸೀಪುರ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕರೆತರಲಾಗುತ್ತಿದೆ ಎನ್ನಲಾಗಿದೆ. Ko
ಹೊಳೆನರಸೀಪುರ ತಾಲೂಕು ಹರದನಹಳ್ಳಿಯಲ್ಲಿರುವ ದೇವಸ್ಥಾನದಲ್ಲಿ ಎಚ್.ಡಿ.ರೇವಣ್ಣ ಬಿದ್ದಿದ್ದು ಮೂಳೆ ಮುರಿದಿರುವ ಶಂಕೆ ವ್ಯಕ್ತವಾಗಿದೆ ಎನ್ನಲಾಗಿದೆ.