ಹೊಸನಗರ: ತಾಲೂಕಿನಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ ಸೇರಿದಂತೆ ಶಾಲಾ ಕಾಲೇಜುಗಳಿಗೆ ಗುರುವಾರ(ಜುಲೈ 18) ದಂದು ರಜೆ ಘೋಷಣೆ ಮಾಡಲಾಗಿದೆ.
ಹೊಸನಗರ ತಾಲೂಕಿನಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹಲವೆಡೆ ಹಾನಿಗಳು ಸಂಭವಿಸಿದೆ, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ ಪರಿಣಾಮ ಮಕ್ಕಳ ಹಿತದೃಷ್ಟಿಯಿಂದ ತಾಲೂಕು ವ್ಯಾಪ್ತಿಯ ಅಂಗನವಾಡಿ ಸೇರಿದಂತೆ ಶಾಲಾ ಕಾಲೇಜುಗಳಿಗೆ ತಹಶೀಲ್ದಾರ್ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.