ಬೆಂಗಳೂರು : ಪಠ್ಯ ಪರಿಷ್ಕರಣೆ ಗೊಂದಲ ನಿವಾರಿಸಲು ಸಮಿತಿ ರಚನೆಗೆ ಸಿಎಂ ಸಿದ್ಧರಾಮಯ್ಯ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಪಠ್ಯಪರಿಷ್ಕರಣೆ ಸಂಬಂಧ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಿನ್ನೆ ಸಭೆ ನಡೆದಿದ್ದು ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಾಹಿತಿ ಬರಗೂರು ರಾಮಚಂದ್ರಪ್ಪ, ಶಿಕ್ಷಣ ತಜ್ಞ ನಿರಂಜನಾರಾಧ್ಯ ಪಾಲ್ಗೊಂಡಿದ್ದರು.
ಈ ನಡುವೆ ಪಠ್ಯ ಪರಿಷ್ಕರಣೆ ಗೊಂದಲ ಬಗೆಹರಿಸಲು ಬರಗೂರು ರಾಮಚಂದ್ರಪ್ಪ ನೇತೃತ್ವದಲ್ಲಿ ತಾತ್ಕಾಲಿಕ ಸಮಿತಿ ರಚಿಸುವಂತೆ ಸಿಎಂ ಸಿದ್ಧರಾಮಯ್ಯ ಸಭೆಯಲ್ಲಿ ಸೂಚನೆ ನೀಡದ್ದಾರೆ ಎನ್ನಲಾಗಿದೆ.