ಶಿವಮೊಗ್ಗ: ಶಂಕಿತ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಆರು ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಶನಿವಾರ ವರದಿಯಾಗಿದೆ.
ಸಾಗರದ ಜನ್ನತ್ ನಗರದ ಆರು ವರ್ಷದ ಮಹಮ್ಮದ್ ನಯಾನ್ ಎಂಬ ಬಾಲಕ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.
ಬಾಲಕ ಕಳೆದ ಐದು ದಿನದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ. ಶುಕ್ರವಾರ ಬಾಲಕನಿಗೆ ತೀವ್ರ ಜ್ವರ, ವಾಂತಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಜ್ವರ, ವಾಂತಿ ಹೆಚ್ಚಾಗಿ ಬಿಪಿ ಕೂಡ ಲೋ ಆಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಬಾಲಕ ಶನಿವಾರ ಮೃತಪಟ್ಟಿದ್ದಾನೆ.