Trending

ಆನವಟ್ಟಿಯ ಉರ್ದು ಶಾಲೆ ಗೋಡೆ ಕುಸಿತ – ವಿದ್ಯಾರ್ಥಿಗಳು ಬಚಾವ್

Spread the love

ಸೊರಬ: ತಾಲೂಕಿನ ಮಳೆಯ ಅರ್ಭಟ ಮುಂದುವರೆದಿದ್ದು, ಆನವಟ್ಟಿ ಪಟ್ಟಣದ ಸರ್ಕಾರಿ ಉರ್ದು ಪ್ರೌಢ ಶಾಲೆಯ ಗೋಡೆ ಮಂಗಳವಾರ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೇ ವಿದ್ಯಾರ್ಥಿಗಳು ಪಾರಾಗಿದ್ದಾರೆ.

ಶಾಲೆಯಲ್ಲಿ 104 ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದು, ಮಧ್ಯಾಹ್ನ ತರಗತಿ ಮುಗಿಸಿ ವಿದ್ಯಾರ್ಥಿಗಳಿಗೆ ವಿಶ್ರಾಂತಿ ನೀಡಲಾಗಿತ್ತು. ತರಗತಿಯಲ್ಲಿ 31 ವಿದ್ಯಾರ್ಥಿಗಳಿದ್ದರು. ಅದೃಷ್ಟವಶಾತ್ ವಿದ್ಯಾರ್ಥಿಗಳಿಗೆ ನೀಡಿದ ವಿಶ್ರಾಂತಿ ಸಮಯದಲ್ಲಿ ಕೊಠಡಿ ಗೋಡೆ ಕುಸಿದಿದೆ. ಆದ್ದರಿಂದ ವಿದ್ಯಾರ್ಥಿಗಳಿಗೆ ಅನಾಹುತವಾಗಿಲ್ಲ.

ಶಾಲೆಯು ಶಿಥಿಲಾವ್ಯಸ್ಥೆಯಲ್ಲಿದ್ದು, ಈ ಬಗ್ಗೆ ಸಂಬಂಧಪಟ್ಟ ಇಲಾಖೆಗೆ ಹಾಗೂ ಸ್ಥಳೀಯ ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ ಎಂಬುದು ಪೋಷಕರ ಆರೋಪವಾಗಿದೆ.

[pj-news-ticker]