ಚಿತ್ರದುರ್ಗ: ಮೊಳಕಾಲ್ಮೂರು ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ಕಾಂಗ್ರೆಸ್ ತೊರೆದು ಅಪಾರ ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆಯಾದರು.
ಸಚಿವ ಶ್ರೀರಾಮುಲು ವಿರುದ್ಧ ಮುನಿಸಿಕೊಂಡು ನಿರಂತರ ವಾಗ್ದಾಳಿ ನಡೆಸುತ್ತಿದ್ದ ತಿಪ್ಪೇಸ್ವಾಮಿ, ಅಂತಿಮವಾಗಿ ಶ್ರೀರಾಮುಲು ಸಮ್ಮುಖದಲ್ಲೇ ಬಿಜೆಪಿ ಸೇರ್ಪಡೆ ಆಗಿದ್ದಾರೆ.
2013 ರಲ್ಲಿ ಬಿಎಸ್ಆರ್ ಕಾಂಗ್ರೆಸ್ ನಿಂದ ಮೊಳಕಾಲ್ಮೂರು ಶಾಸಕರಾಗಿ ಆಯ್ಕೆಯಾಗಿದ್ದರು. 2018 ರಲ್ಲಿ ಶ್ರೀರಾಮುಲು ಮೊಳಕಾಲ್ಮೂರು ಅಭ್ಯರ್ಥಿಯಾಗಿದ್ದರಿಂದ ತಿಪ್ಪೇಸ್ವಾಮಿ ಅವರಿಗೆ ಬಿಜೆಪಿ ಟಿಕೆಟ್ ಕೈ ತಪ್ಪಿತ್ತು. ಇದರಿಂದ ಕುಪಿತಗೊಂಡು ಶ್ರೀರಾಮುಲು ವಿರುದ್ಧ ಮುನಿಸಿಕೊಂಡು ಕಾಂಗ್ರೆಸ್ ಸೇರಿದ್ದರು.
ಈಗ ಮತ್ತೆ ವಿಧಾನಸಭೆ ಚುನಾವಣೆ ಕಾವೇರುತ್ತಿದ್ದು, ತಿಪ್ಪೇಸ್ವಾಮಿ ಬಿಜೆಪಿ ಸೇರ್ಪೆಡೆಯೊಂದಿಗೆ ಬಹುತೇಕ ಬಿಜೆಪಿ ಟಿಕೆಟ್ ಅವರಿಗೆ ನಿಶ್ಚಿತ ಎನ್ನಬಹುದು.