Trending

ಶಿವಮೊಗ್ಗ: ಡೆಂಘೀ ಜ್ವರಕ್ಕೆ ಮೆಗ್ಗಾನ್ ಆಸ್ಪತ್ರೆಯ ನರ್ಸಿಂಗ್ ಆಫೀಸರ್ ಬಲಿ

Spread the love

ಶಿವಮೊಗ್ಗ: ಮಲೆನಾಡಿನ ಶಿವಮೊಗ್ಗದಲ್ಲಿ ಡೆಂಘೀ ಅಟ್ಟಹಾಸ ಮುಂದುವರೆದಿದ್ದು, ಡೆಂಘೀ ಜ್ವರಕ್ಕೆ ಚಿಕಿತ್ಸೆ ಪಡೆಯುತ್ತಿದ್ದ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ನರ್ಸಿಂಗ್ ಆಫೀಸರ್ ಮೃತಪಟ್ಟಿದ್ದಾರೆ.

ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ನರ್ಸಿಂಗ್ ಆಫೀಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಹೇಮಾ (45) ಚಿಕಿತ್ಸೆ ಫಲಿಸದೇ ಮೃತಪಟ್ಟವರು.

ಭದ್ರಾವತಿ ಮೂಲದ ಹೇಮಾ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಈ ಮೂಲಕ ಶಿವಮೊಗ್ಗದಲ್ಲಿ ಡೆಂಘೀನಿಂದ ಸಾವನ್ನಪ್ಪಿದರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.

[pj-news-ticker]