ಹೊಸದಿಲ್ಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಜೈಲುಪಾಲಾಗಿರುವ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ದಿಲ್ಲಿ ರೋಸ್ ಅವೆನ್ಯೂ ಕೋರ್ಟ್ ಮತ್ತೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಿದೆ.
ಸದ್ಯ ತಿಹಾರ್ ಜೈಲಿನಲ್ಲಿರುವ ಅರವಿಂದ ಕೇಜ್ರಿವಾಲ್ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ ವಿಚಾರಣೆ ಹಾಜರಾಗಿದ್ದರು.
ವಿಚಾರಣೆ ನಡೆಸಿದ ರೋಸ್ ಅವೆನ್ಯೂ ಕೋರ್ಟ್, ಆ.8ರವರೆಗೆ ಅವರ ನ್ಯಾಯಾಂಗ ಬಂಧನವನ್ನು ವಿಸ್ತರಿಸಿದೆ. ವಿಶೇಷ ಕೋರ್ಟ್ ನ್ಯಾಯಾಧೀಶೆ ಕಾವೇರಿ ಭವೇಜಾ ಈ ಆದೇಶ ಹೊರಹಾಕಿದ್ದಾರೆ. ಅಲ್ಲದೇ ಜು.31ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಕೇಜ್ರಿವಾಲ್ ಅವರನ್ನು ಹಾಜರುಪಡಿಸುವಂತೆ ತಿಹಾರ್ ಜೈಲಿನ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
2021-22 ರ ದೆಹಲಿ ಮದ್ಯದ ಅಬಕಾರಿ ನೀತಿ 2021-22ಕ್ಕೆ ಸಂಬಂಧಿಸಿದಂತೆ ಇಡಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಬಿಆರ್‌ಎಸ್ ನಾಯಕಿ ಕೆ ಕವಿತಾ ಮತ್ತು ಇತರ ಆರೋಪಿಗಳ ನ್ಯಾಯಾಂಗ ಬಂಧನವನ್ನು ನ್ಯಾಯಾಲಯ ವಿಸ್ತರಿಸಿದೆ.