Trending

ಶಿವಮೊಗ್ಗ : ದಾರಿ ಉದ್ದಕ್ಕೂ ಜಗಳದ ಬಳಿಕ ಸೌಮ್ಯ ಹತ್ಯೆ ಮಾಡಿದ ಸೃಜನ್: ಎಸ್ ಪಿ ಹೇಳಿಕೆ

Spread the love

ಶಿವಮೊಗ್ಗ: ಪ್ರೀತಿಸಿ ಮದುವೆಯಾಗುತ್ತೇನೆ ಎಂದು ನಂಬಿಸಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆ ನಡೆಸುತ್ತಿದ್ದು ‘ಸೌಮ್ಯಳನ್ನು ಹತ್ಯೆ ಮಾಡಿರುವುದಾಗಿ ಆರೋಪಿ ಸೃಜನ್ ಒಪ್ಪಿಕೊಂಡಿದ್ದಾನೆ’ ಎಂದು ಶಿವಮೊಗ್ಗ ಎಸ್ ಪಿ ಮಿಥುನ್ ಕುಮಾರ್ ಗುರುವಾರ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ ‘ ಹತ್ಯೆಗೀಡಾದ ಸೌಮ್ಯಳನ್ನು ಫೈನಾನ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕ ಸೃಜನ್ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ, ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂರು ವರ್ಷದಿಂದ ಹಿಂದೆ ಇಬ್ಬರ ನಡುವೆ ಪರಿಚಯ ವಾಗಿ,ಸಲುಗೆಯಿಂದ ಪ್ರೀತಿ ಬೆಳೆದಿತ್ತು’ ಎಂದು ತಿಳಿಸಿದ್ದಾರೆ.

ಇತ್ತೀಚೆಗೆ ಸಾಗರಕ್ಕೆ ವರ್ಗಾವಣೆ ಗೊಂಡಿದ್ದ ಸೃಜನ್ ಗೆ ಬೇರೆ ಹುಡುಗಿ ಜತೆ ಸಲುಗೆ ಬೆಳೆದಿತ್ತು. ಆ ಕಾರಣದಿಂದ ಸೌಮ್ಯ ಮದುವೆ ಆಗುವಂತೆ ಒತ್ತಾಯಿಸುತ್ತಿದ್ದಳು. ಸೌಮ್ಯ ಕೊಪ್ಪದಿಂದ ಸಾಗರಕ್ಕೆ ಬಂದು ಹೋಗುತ್ತಿದ್ದಳು. ಸೃಜನ್ ಬೇರೆ ಹುಡುಗಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕೆ ಸೌಮ್ಯ ವಿರೋಧಿಸಿದ್ದಳು. ಸೃಜನ್ ಸಾಗರದಿಂದ ಸೌಮ್ಯಳನ್ನು ಬೈಕ್ ನಲ್ಲಿ ಕರೆದುಕೊಂಡು ಹೋಗಿದ್ದಾನೆ.ದಾರಿ ಉದ್ದಕ್ಕೂ ಜಗಳ ಮಾಡಿಕೊಂಡು ಬಂದಿದ್ದಾರೆ. ಕೋಪದಿಂದ ಸೌಮ್ಯಳಿಗೆ ಹೊಡೆದಿದ್ದು ಆಕೆ ಕೆಳಕ್ಕೆ ಬಿದ್ದ ನಂತರ ಕಾಲಿನಿಂದ ಕುತ್ತಿಗೆಗೆ ತುಳಿದಿದ್ದಾನೆ. ಸಾವನ್ನಪ್ಪಿದ ನಂತರ ಸಾಗರಕ್ಕೆ ಬಂದು ಕಾರು ತೆಗೆದುಕೊಂಡು ಹೋಗಿದ್ದಾನೆ. ಕಾರಿನಲ್ಲಿ ಮೃತದೇಹ ತಂದು ಜಲಜೀವನ್ ಕಾಮಗಾರಿಯ ಕಾಲುವೆಯಲ್ಲಿ ಹೂತಿಟ್ಟಿದ್ದಾನೆ. ಈಗ ಕುಟುಂಬಸ್ಥರು,ಎಸಿ ಸಮ್ಮುಖದಲ್ಲಿ ಮೃತದೇಹ ಹೊರತೆಗೆಯಲಾಗಿದೆ’ ಎಂದು ತಿಳಿಸಿದರು.

ಸೌಮ್ಯ ಕೊಪ್ಪ ತಾಲೂಕಿನ ಗುಣವಂತೆ ಸಮೀಪ ಹಚ್ಚರಡಿ ಗ್ರಾಮದವಳಾಗಿದ್ದು, ಆರೋಪಿ ಭರತ್ ಕೂಡ ಕೊಪ್ಪ ಮೂಲದವನು. ನರ್ಸಿಂಗ್ ಕಲಿಯುತ್ತಿದ್ದ ಸೌಮ್ಯ ಜು.2 ರಂದು ಕಾಣೆಯಾಗಿದ್ದು, ಮನೆಯವರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

[pj-news-ticker]