ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೂರು ದಿನಗಳ ಹಿಂದಷ್ಟೇ 2024ನೇ ಸಾಲಿನ ಬಜೆಟ್ ಮಂಡಿಸಿದ್ದು, ಆಮದು ಚಿನ್ನದ ಮೇಲಿನ ತೆರಿಗೆಯನ್ನು ಕಡಿತಗೊಳಿಸುವುದಾಗಿ ಘೋಷಿಸಿದ್ದರು. ಅದರ ಪರಿಣಾಮ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆಯಾಗಿದ್ದು, ಶುಕ್ರವಾರ ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 5,000 ರೂಪಾಯಿ ಇಳಿಕೆಯಾಗಿದೆ.
ಆಮದು ಚಿನ್ನದ ಮೇಲಿನ ಸುಂಕವನ್ನು ಶೇ.6.4ಕ್ಕೆ ಇಳಿಸಿದ ಬೆನ್ನಲ್ಲೇ ಹಳದಿ ಲೋಹದ ಬೆಲೆ ಭಾರೀ ಪ್ರಮಾಣದಲ್ಲಿ ಇಳಿಕೆಯಾಗುತ್ತಿರುವುದು ಹೂಡಿಕೆದಾರರು ಮತ್ತು ಖರೀದಿದಾರರ ಗಮನ ಸೆಳೆದಿರುವುದಾಗಿ ವರದಿ ತಿಳಿಸಿದೆ.
ಆಮದು ಚಿನ್ನದ ಮೇಲಿನ ಸುಂಕವನ್ನು ಕಡಿತಗೊಳಿಸುವುದರಿಂದ ಚಿನ್ನ ಕಳ್ಳ ಸಾಗಣಿಕೆಗೆ ಕಡಿವಾಣ ಹಾಕುವುದರ ಜೊತೆಗೆ ಜ್ಯುವೆಲ್ಲರಿ ಸೆಕ್ಟರ್ ನ ವಹಿವಾಟನ್ನು ಇನ್ನಷ್ಟು ಬಲಗೊಳಿಸಲು ಸಾಧ್ಯವಾಗಲಿದೆ ಎಂಬುದು ಮಾರುಕಟ್ಟೆ ವಿಶ್ಲೇಷಕರ ಅಭಿಪ್ರಾಯವಾಗಿದೆ.