Breaking
Mon. Oct 14th, 2024

ಶೆಟ್ಟರ್ ಪಕ್ಷ ತೊರೆದಿದ್ದಕ್ಕೆ ಡಿಕೆ ಶಿವಕುಮಾರ್ ಗೆ ಎಚ್ಚರಿಕೆ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

By Mooka Nayaka News Jan 26, 2024
Spread the love

ಬೆಂಗಳೂರು: ಜಗದೀಶ್ ಶೆಟ್ಟರ್ ಪಕ್ಷ ತೊರೆದು ಮರಳಿ ಬಿಜೆಪಿ ಸೇರ್ಪಡೆಯಾಗಿರುವ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಹಿರಂಗವಾಗಿಯೇ ಎಚ್ಚರಿಕೆ ನೀಡಿದ್ದಾರೆ.

ಗಣರಾಜ್ಯೋತ್ಸವ ಪ್ರಯುಕ್ತ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಅವರು ಧ್ವಜಾರೋಹಣ ನೆರವೇರಿಸಿದರು. ಇದಕ್ಕೂ ಮುನ್ನ ಅವರು ಡಿಕೆ ಶಿವಕುಮಾರ್ ಗೆ ಎಚ್ಚರಿಕೆ ನೀಡಿದ್ದಾರೆ.

ಪಕ್ಷಕ್ಕೆ ಯಾರನ್ನಾದರೂ ಸೇರಿಸಿಕೊಳ್ಳುವಾಗ ಯೋಚಿಸಬೇಕು. ಅವರ ಹಿನ್ನೆಲೆ, ಸಿದ್ಧಾಂತ ಏನೆಂದು ಅರಿತುಕೊಳ್ಳಬೇಕು. ಪಕ್ಷಕ್ಕೆ ನಿಷ್ಠಾವಂತರು ಮಾತ್ರ ಬರಬೇಕು. ಹೀಗೆ ಬಂದರು, ಹಾಗೆ ಹೋದರು ಅಂತ ಆಗಬಾರದು. ಅವರ ತತ್ವಗಳ ಆಧಾರದ ಮೇಲೆ ಸೇರ್ಪಡೆ ಮಾಡಿಕೊಳ್ಳಿ ಎಂದು ರಾಜ್ಯ ನಾಯಕರಿಗೆ ಖರ್ಗೆ ಕಿವಿಮಾತು ಹೇಳಿದರು. ಜತೆಗೆ, ಪರೋಕ್ಷವಾಗಿ ಶೆಟ್ಟರ್ ಬಗ್ಗೆ ಅಸಮಧಾನ ವ್ಯಕ್ತಪಡಿಸಿದರು.

ಇನ್ನು ಧ್ವಜಾರೋಹಣ ನೆರವೇರಿಸಿ ನಂತರ ಮಾತನಾಡಿದ ಖರ್ಗೆ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಜನವರಿ 26 ಭಾರತದ ಇತಿಹಾಸದಲ್ಲಿ ವಿಶೇಷ ದಿನ. ಸಂವಿಧಾನ ಇಲ್ಲದಿದ್ರೆ ಪ್ರಜಾಪ್ರಭುತ್ವ ಉಳಿಯುತ್ತಿರಲಿಲ್ಲ. ಸಂವಿಧಾನ ತಿರುಚುವ ಕುತಂತ್ರವನ್ನು ಆರ್ಎಸ್ಎಸ್, ಬಿಜೆಪಿ ಮಾಡುತ್ತಿವೆ. ಸ್ವಾಯತ್ತ ಸಂಸ್ಥೆಗಳನ್ನ ನಾಶ ಮಾಡಲು ಬಿಜೆಪಿ ಪ್ರಯತ್ನಿಸುತ್ತಿದೆ. ಪ್ರಧಾನಿ ಮೋದಿ ಆರ್ಎಸ್ಎಸ್ ಕೈಗೊಂಬೆಯಾಗಿ ನಡೆದುಕೊಂಡಿದ್ದಾರೆ. ಇದರಿಂದ ನ್ಯಾಯಾಂಗ, ಜಾತ್ಯತೀತ ತತ್ವಕ್ಕೆ ದೊಡ್ಡ ಪೆಟ್ಟು ಬಿದ್ದಿದೆ ಎಂದರು.

ಇವತ್ತು ಸಂವಿಧಾನವನ್ನು ಮುನ್ನಡೆಸುತ್ತಿರುವ ಜನ ಸರಿ ಇಲ್ಲ. ದೇಶದಲ್ಲಿ ಸ್ವಾತಂತ್ರ್ಯ ಬಂದ ದಿನದಿಂದ 2014ರವರೆಗೆ 55 ಲಕ್ಷ ಕೋಟಿ ರೂಪಾಯಿ ಸಾಲ ಇತ್ತು. ಒಂದು ಕೋಟಿ ಐವತ್ತು ಲಕ್ಷದಷ್ಟು ಸಾಲ ಇವತ್ತು ಹೆಚ್ಚಾಗಿದೆ. ಅನುಭವದಿಂದ ದೇಶಕ್ಕೆ ಒಳ್ಳೆಯ ಕೆಲಸವನ್ನು ನಮ್ಮ ನಾಯಕರು ಮಾಡಿಕೊಟ್ಟಿದ್ದಾರೆ. ನಮ್ಮ ಯುವಕರಿಗೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕಷ್ಟ ಇದೆ ಎಂದು ಖರ್ಗೆ ಹೇಳಿದರು.

Related Post