Spread the love

ಡೆಹ್ರಾಡೂನ್: ಭಾರಿ ಮಳೆ ಹಿನ್ನಲೆಯಲ್ಲಿ ಪವಿತ್ರ ಕೇದಾರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ರುದ್ರಪ್ರಯಾಗ ಜಿಲ್ಲಾ ಮ್ಯಾಜಿಸ್ಟ್ರೇಟ್ ಮಯೂರ್ ದೀಕ್ಷಿತ್ ಮಾಹಿತಿ ನೀಡಿದ್ದು, ರುದ್ರಪ್ರಯಾಗ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಸೋನ್‌ಪ್ರಯಾಗದಲ್ಲಿ ಕೇದಾರನಾಥ ಯಾತ್ರೆಯನ್ನು ಮುಂದಿನ ಆದೇಶದವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ಉತ್ತರ ಭಾರತದಲ್ಲಿ ಮಾನ್ಸೂನ್ ಮಾರುತಗಳು ಪ್ರವೇಶ ಮಾಡಿದ್ದು, ಅಸ್ಸಾಂ, ಉತ್ತರಾಖಂಡ, ಹಿಮಾಚಲ ಪ್ರದೇಶ, ಮ್ಮು ಮತ್ತು ಕಾಶ್ಮೀರ ಸೇರಿದಂತೆ ಹಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಪ್ರಮುಖವಾಗಿ ಉತ್ತರಾಖಂಡದಲ್ಲಿ ಮಳೆ ಮುಂದುವರೆದಿದ್ದು, ಹರಿದ್ವಾರದಲ್ಲಿ ಕಳೆದ 24 ಗಂಟೆಗಳಲ್ಲಿ 78 ಮಿಮೀ ಮಳೆಯಾಗಿದೆ. ಅಂತೆಯೇ ರಾಜಧಾನಿ ಡೆಹ್ರಾಡೂನ್ 33.2 ಮಿ.ಮೀ ಮಳೆಯಾಗಿದ್ದು, ಉತ್ತರಕಾಶಿ 27.7ಮಿ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Leave a Reply

Your email address will not be published. Required fields are marked *