ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಸಿಬಿಐ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಭಾನುವಾರ ಸುದೀರ್ಘ ವಿಚಾರಣೆಯ ಬಳಿಕ ಬಂಧಿಸಿದೆ.
ವಿಚಾರಣೆಗೆ ಹಾಜರಾಗುವ ಗಂಟೆಗಳ ಮೊದಲು ಬೆಳಗ್ಗೆ 10 ಗಂಟೆಗೆ ತಮ್ಮ ಮನೆಯಿಂದ ಹೊರಟಾಗ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರೊಂದಿಗೆ ರೋಡ್ ಶೋ ಮತ್ತು ಭಾಷಣ ಮಾಡಿದ್ದರು.
ಭಿತ್ತಿಪತ್ರಗಳು ಮತ್ತು ಘೋಷಣೆಗಳ ನಡುವೆ, ಅವರು ತಮ್ಮ ಕಾರಿನ ಸನ್‌ರೂಫ್ ಮೇಲೆ ನಿಂತು ತಮ್ಮ ಬೆಂಬಲಿಗರತ್ತ ಕೈ ಬೀಸಿದರು. ಸಿಸೋಡಿಯಾ ಅವರು ಭಾಷಣ ಮಾಡುವ ಮೊದಲು ದೆಹಲಿಯ ರಾಜ್‌ಘಾಟ್‌ನಲ್ಲಿರುವ ಮಹಾತ್ಮ ಗಾಂಧಿಯವರ ಸ್ಮಾರಕಕ್ಕೆ ಭೇಟಿ ನೀಡಿದ್ದರು.
ಸಿಬಿಐ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದ್ದಕ್ಕಾಗಿ ಸಂಸದ ಸಂಜಯ್ ಸಿಂಗ್ ಮತ್ತು ಇತರ ಪಕ್ಷದ ನಾಯಕರನ್ನು ದೆಹಲಿ ಪೊಲೀಸರು 50ಕ್ಕೂ ಹೆಚ್ಚು ಎಎಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.