ಶಿವಮೊಗ್ಗ: ಜಿಲ್ಲೆಯ ಸೊರಬ, ಶಿರಾಳಕೊಪ್ಪ ಪುರಸಭೆ, ಹೊಳೆಹೊನ್ನೂರು, ತೀರ್ಥಹಳ್ಳಿ ಪಟ್ಟಣ ಪಂಚಾಯ್ತಿ ಹಾಗೂ ಭದ್ರಾವತಿ, ಸಾಗರ ನಗರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗೆ ಮೀಸಲಾತಿ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ.
ಈ ಕುರಿತಂತೆ ರಾಜ್ಯ ಸರ್ಕಾರದಿಂದ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಿದ್ದು, ಸೊರಬ ಪುರಸಭೆಯ ಅಧ್ಯಕ್ಷರ ಹುದ್ದೆಯನ್ನು ಎಸ್ಸಿ ಮಹಿಳೆ ಹಾಗೂ ಉಪಾಧ್ಯಕ್ಷರ ಹುದ್ದೆಯನ್ನು ಜನರಲ್ ಮಹಿಳೆಗೆ ಮೀಸಲಿರಿಸಲಾಗಿದೆ. ಶಿರಾಳಕೊಪ್ಪ ಪುರಸಭೆಯ ಅಧ್ಯಕ್ಷರ ಹುದ್ದೆಯನ್ನು ಎಸ್ಸಿ ಮಹಿಳೆ ಹಾಗೂ ಉಪಾಧ್ಯಕ್ಷರ ಹುದ್ದೆಯನ್ನು ಬಿಸಿಎಗೆ ಮೀಸಲಿಡಲಾಗಿದೆ.
ಹೊಳೆ ಹೊನ್ನೂರು ಪಟ್ಟಣ ಪಂಚಾಯ್ತಿಯ ಅಧ್ಯಕ್ಷರ ಹುದ್ದೆಯನ್ನು ಎಸ್ಟಿ ಮಹಿಳೆ ಹಾಗೂ ಉಪಾಧ್ಯಕ್ಷರ ಹುದ್ದೆಯನ್ನು ಜನರಲ್ ಮಹಿಳೆಗೆ ಮೀಸರಿಲಿಸಲಾಗಿದೆ. ತೀರ್ಥಹಳ್ಳಿ ಪಟ್ಟಣ ಪಂಚಾಯ್ತಿ ಅಧ್ಯಕ್ಷ ಸ್ಥಾನವನ್ನು ಜನರಲ್, ಉಪಾಧ್ಯಕ್ಷ ಸ್ಥಾನವನ್ನು ಬಿಸಿಎ ಮಹಿಳೆಗೆ ಮೀಸರಿಲಿಸಲಾಗಿದೆ.
ಭದ್ರಾವತಿ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಜನರಲ್ ಮಹಿಳೆ, ಉಪಾಧ್ಯಕ್ಷ ಸ್ಥಾನವನ್ನು ಜನರಲ್ ಗೆ ಮೀಸಲಾತಿ ನೀಡಲಾಗಿದೆ. ಸಾಗರ ನಗರಸಭೆಯ ಅಧ್ಯಕ್ಷ ಸ್ಥಾನವನ್ನು ಜನರಲ್ ಮಹಿಳೆ, ಉಪಾಧ್ಯಕ್ಷ ಸ್ಥಾನವನ್ನು ಬಿಸಿಎಗೆ ಮೀಸಲಿರಿಸಿ ರಾಜ್ಯ ಸರ್ಕಾರದ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಿದೆ.