ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಎಲ್ ಕೆ ಅಡ್ವಾಣಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳವಾರ ರಾಷ್ಟ್ರ ರಾಜಧಾನಿಯ ಪ್ರಮುಖ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.
96 ವರ್ಷದ ಅಡ್ವಾಣಿ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿವೆ. ಜುಲೈ ಮೊದಲ ವಾರದಲ್ಲಿಯೂ ಅಡ್ವಾಣಿ ಅವರನ್ನು ಈ ಆಸ್ಪತ್ರೆಗೆ ಕರೆತಂದು ಒಂದೆರಡು ದಿನಗಳ ಕಾಲ ನಿಗಾದಲ್ಲಿರಿಸಿ ನಂತರ ಡಿಸ್ಚಾರ್ಜ್ ಮಾಡಲಾಗಿತ್ತು.