ಮೈಸೂರು : ಮುಡಾ ಹಗರಣ ಸಂಬಂಧ ರಾಜ್ಯಪಾಲರು ನೀಡಿರುವ ನೋಟಿಸ್ ಗೆ ಈಗಾಗಲೇ ನಾನು ಉತ್ತರ ಕೊಟ್ಟಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರಿಂದ ನನಗೆ ಬಂದಿರುವುದು ಒಂದೇ ನೋಟಿಸ್, ಆ ನೋಟಿಸ್ ಗೆ ನಾನು ಉತ್ತರ ಕೊಟ್ಟಿದ್ದೇನೆ.ಸಿಎಸ್ ರಾಜ್ಯಪಾಲರನ್ನು ಭೇಟಿಯಾಗಿರುವುದು ಬೇರೆ ವಿಚಾರಕ್ಕೆ, ಸಿಎಸ್ ಆಗಿ ನೇಮಕವಾಗಿರುವುದಕ್ಕೆ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ ಎಂದರು.
ರಾಜ್ಯಪಾಲರು ನೀಡಿರುವ ನೋಟಿಸ್ ಗೆ ನಾನು ಈಗಾಗಲೇ ಉತ್ತರ ಕೊಟ್ಟಿದ್ದೇನೆ, ಸಚಿವ ಸಂಪುಟದಿಂದ ನೋಟಿಸ್ ಗೆ ಉತ್ತರ ನೀಡಲಾಗಿದೆ. ಕಾನುನಾತ್ಮಕವಾಗಿ ರಾಜ್ಯಪಾಲರು ಉತ್ತರನ್ನು ಒಪ್ಪಿಕೊಳ್ಳಬೇಕು ಎಂದು ಹೇಳಿದ್ದಾರೆ.